ಸರ್ಕಾರದ ನೌಕರ – ಕಾರ್ಮಿಕ ವಿರೋಧಿ ನೀತಿ ವಿರುದ್ಧ ಆಕ್ರೋಶ

ಕಪ್ಪು ಬ್ಯಾಡ್ಜ್ ಧರಿಸಿ ಕರ್ತವ್ಯ ನಿರ್ವಹಿಸಿದ ನೌಕರರು

ದಾವಣಗೆರೆ, ಜೂ.4- ಸರ್ಕಾರದ ನೌಕರ – ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಕರೆ ಮೇರೆಗೆ ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಅಂಗವಾಗಿ ಜಿಲ್ಲಾ ಸರ್ಕಾರಿ ನೌಕರರು ಇಂದು ಕಪ್ಪು ಬ್ಯಾಡ್ಜ್ ಧರಿಸಿ ಕರ್ತವ್ಯ ನಿರ್ವಹಿಸಿದ್ದಾರೆ.

ನಂತರ ಜಿಲ್ಲಾಡಳಿತಕ್ಕೆ ತೆರಳಿ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖೇನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.

ಕೊರೊನಾ ಹರಡುವಿಕೆ ತಡೆಗಟ್ಟುವಲ್ಲಿ ನೌಕರರು ಮುಂಚೂಣಿಯಲ್ಲಿ ನಿಂತು ಒತ್ತಡದಲ್ಲಿ ಕೆಲಸ ಮಾಡುತ್ತಿರುವಾಗ ಕೇಂದ್ರ ಸರ್ಕಾರವನ್ನು ಅನುಸರಿಸಿ ರಾಜ್ಯ ಸರ್ಕಾರವು ನೌಕರರು ಮತ್ತು ಪಿಂಚಣಿದಾರರಿಗೆ 2020ರ ಜನವರಿಯಿಂದ 2021ರ ಜೂನ್ ವರೆಗೆ ತುಟ್ಟಿಭತ್ಯೆ ಹೆಚ್ಚಳ ದರವನ್ನು ಸ್ಥಗಿತಗೊಳಿಸಿದ್ದು, ಈ ಅವಧಿಯ 18 ತಿಂಗಳ ತುಟ್ಟಿ ಭತ್ಯೆ ಹೆಚ್ಚಳ ಮೊತ್ತದ ಹಿಂಬಾಕಿ ಯನ್ನು ಪಾವತಿಸಲಾಗುವುದಿಲ್ಲ ಎಂದು ಆದೇಶಿ ಸಿದೆ. 2020ನೇ ಸಾಲಿನ ಗಳಿಕೆ ರಜೆ ನಗದೀಕ ರಣ ಸೌಲಭ್ಯವನ್ನು ರದ್ದುಗೊಳಿಸಿದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲಾಖೆಗಳ ವಿಲೀನದ ಹೆಸರಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ಸಾವಿರ ಹುದ್ದೆಗಳನ್ನು ಕಡಿತಗೊಳಿಸಲು ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಕೊರೊನಾ ಹರಡುವಿಕೆ ತಡೆಗಟ್ಟು ವಿಕೆ ವೇಳೆ ಎಲ್ಲಾ ಅತ್ಯವಶ್ಯಕ ಸೇವೆಗಳನ್ನು ಒದಗಿ ಸುವ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಮಾರೋಪಾದಿಯಲ್ಲಿ ಕ್ರಮ ವಹಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎನ್.ಇ. ನಟರಾಜ, ಜಿಲ್ಲಾಧ್ಯಕ್ಷ ಎಂ.ಆರ್. ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ರೆಡ್ಡಿ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ, ಸಂಘಟನಾ ಕಾರ್ಯದರ್ಶಿ ನೇತ್ರಾವತಿ, ಹಿರಿಯ ಉಪಾಧ್ಯಕ್ಷ ವರದರಾಜ್, ಸಹ ಕಾರ್ಯದರ್ಶಿಗಳಾದ ತ್ರಿಲೋಕ್, ಹರೀಶ್ ಸೇರಿದಂತೆ ಇತರರು ಇದ್ದರು.

error: Content is protected !!