ರಾಣೇಬೆನ್ನೂರು ಶಾಸಕ ಅರುಣಕುಮಾರ್
ರಾಣೇಬೆನ್ನೂರು, ಜೂ. 6- ಸಮಾಜದಲ್ಲಿ ಪ್ರತಿಯೊಬ್ಬರೂ ಪರಿಸರ ಕಾಳಜಿ ಹೊಂದುವ ಮೂಲಕ ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಇಲ್ಲಿನ 10ನೇ ವಾರ್ಡ್‍ನ ರಂಗನಾಥ ನಗರದಲ್ಲಿ ನಗರಸಭೆ, ಅರಣ್ಯ ಇಲಾಖೆ ಹಾಗೂ ರೈಲ್ವೆ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಧುನಿಕ ಯುಗದಲ್ಲಿ ಪರಿಸರ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಮನುಷ್ಯ ನೂರಾರು ಕಾಯಿಲೆಗಳಿಂದ ಬಳಲಬೇಕಾಗಿದೆ. ಹೀಗಾಗಿ ಉತ್ತಮ ಪರಿಸರ ನಿರ್ಮಾಣವಾಗಲು ನಾವೆಲ್ಲರೂ ಸಸಿಗಳನ್ನು ಬೆಳೆಸಲು ಮುಂದಾಗಬೇಕಾಗಿದೆ. ಸಸಿಗಳನ್ನು ನೆಡುವ ಜತೆಗೆ ಅವುಗಳನ್ನು ಬೆಳೆಸುವ ಜವಾಬ್ದಾರಿಯನ್ನು ಹೊರಬೇಕು ಎಂದರು.
ಜಿ.ಪಂ. ಸದಸ್ಯರಾದ ಏಕನಾಥ ಭಾನುವಳ್ಳಿ, ಮಂಗಳಗೌರಿ ಪೂಜಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ನಗರಸಭೆ ಸದಸ್ಯರಾದ ಮಲ್ಲಣ್ಣ ಅಂಗಡಿ, ಮಂಜುಳಾ ಹತ್ತಿ, ಬಿಜೆಪಿ ಮುಖಂಡ ಮಂಜು ನಾಥ ಓಲೇಕಾರ, ಎಪಿಎಂಸಿ ಸದಸ್ಯ ಬಸವರಾಜ ಹುಲ್ಲತ್ತಿ, ನಗರಸಭೆ ಆಯುಕ್ತ ಡಾ.ಮಹಾಂತೇಶ, ಎಂಜಿನಿಯರ್ ಬಿ.ಎಸ್. ಪಾಟೀಲ, ಪರಿಸರ ಎಂಜಿನಿಯರ್ ಮಂಜುಳಾದೇವಿ, ಅರಣ್ಯ ಇಲಾಖೆಯ ಆರ್‍ಎಫ್‍ಒ ಬಸವರಾಜ್ ಅರಿಶಿಣದ ಮತ್ತಿತರರು ಉಪಸ್ಥಿತರಿದ್ದರು.