ಶಾಸಕ ರೇಣುಕಾಚಾರ್ಯ ಅವರಿಂದ ಕಂದಾಯ ಸಚಿವರಿಗೆ ಮನವಿ ಸಲ್ಲಿಕೆ
ನ್ಯಾಮತಿ, ಜೂ.10- ನ್ಯಾಮತಿ ನೂತನ ತಾಲ್ಲೂಕಾಗಿ ಮೂರು ವರ್ಷಗಳಾಗಿದ್ದರೂ ತಾಲ್ಲೂಕು ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಮೂಲಕ ತಾಲ್ಲೂಕನ್ನು ಅಭಿವೃದ್ಧಿ ಮಾಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಇಂದು ಲಿಖಿತವಾಗಿ ಮನವಿ ಸಲ್ಲಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಕಂದಾಯ ಸಚಿವರನ್ನು ಭೇಟಿ ಮಾಡಿದ ತಾಲ್ಲೂಕು ಪಂಚಾ ಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಬಿಜೆಪಿ ಮುಖಂಡರು ನ್ಯಾಮತಿ ತಾಲ್ಲೂಕಿಗೆ ಅನು ದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
2017ರಲ್ಲಿ ನ್ಯಾಮತಿ ನೂತನ ತಾಲ್ಲೂಕಾಗಿ ಘೋಷ ಣೆಯಾದಾಗಿನಿಂದ ಇಲ್ಲಿಯವರೆಗೂ ಸರಿಯಾದ ತಾಲ್ಲೂಕು ಕಚೇರಿ ಇಲ್ಲ. ಇದರ ಜೊತೆ ತಾಲ್ಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಹಳೆಯ ನಾಡ ಕಚೇ ರಿಯಲ್ಲೇ ನ್ಯಾಮತಿ ತಾಲ್ಲೂಕು ಕಚೇರಿ ಕಾರ್ಯ ನಿರ್ವಹಿ ಸುತ್ತಿದ್ದು, ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನೆಲೆ ಯಲ್ಲಿ ತಾಲ್ಲೂಕಿನ ಎಲ್ಲಾ ಕಚೇರಿಗಳು ಒಂದೇ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲು ಅನುಕೂಲವಾಗುವ ರೀತಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆ ಮಾಡುವಂತೆ ಕಂದಾಯ ಸಚಿವರಿಗೆ ಮನವಿ ಮಾಡಿದರು.
ನ್ಯಾಮತಿ ತಾಲ್ಲೂಕಾದಾಗಿನಿಂದ ತಾಲ್ಲೂಕಿಗೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೇ ಸಾರ್ವಜನಿಕರು, ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡಿ ತಾಲ್ಲೂಕನ್ನು ಅಭಿವೃದ್ಧಿ ಪಡಿಸಲು ಸಹಕಾರ ನೀಡುವಂತೆ ಕಂದಾಯ ಸಚಿವರಲ್ಲಿ ಮನವಿ ಮಾಡಿದರು.
ಶಾಸಕರ ಮನವಿಗೆ ಸ್ಪಂದಿಸಿದ ಕಂದಾಯ ಸಚಿವ ಆರ್. ಅಶೋಕ್, ಮುಂದಿನ ದಿನಗಳಲ್ಲಿ ನ್ಯಾಮತಿ ತಾಲ್ಲೂಕಿಗೆ ಬೇಕಾದ ಅಗತ್ಯ ಅನುದಾನ ಬಿಡುಗಡೆ ಮಾಡಿ, ತಾಲ್ಲೂಕನ್ನು ಅಭಿವೃದ್ಧಿ ಮಾಡಲು ಸಹಕಾರ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಪ್ರೀತಂ ಗೌಡ, ನ್ಯಾಮತಿ ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಪಿ.ರವಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ರವಿ, ಬಿಜೆಪಿ ಮುಖಂಡ ಅಜಯ್‍ಕುಮಾರ್ ಸೇರಿದಂತೆ ಮತ್ತಿತರಿದ್ದರು.