ದಾವಣಗೆರೆ, ಜೂ.21- ಲಡಾಖ್ ಗಡಿಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಮೊನ್ನೆ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮೇಣದ ಬೆಳಕು ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಲ್ಲದೇ, ಚೀನಾ ಪ್ರಧಾನಿಯ ಪ್ರತಿಕೃತಿ ದಹಿಸಲಾಯಿತು. ದೇಶದ ಸೈನಿಕರ ಜೊತೆ ನಾವಿದ್ದೇವೆ ಎಂಬ ಧೈರ್ಯ ತುಂಬಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ದೇಶದ ಭದ್ರತೆ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಚೀನಾಕ್ಕೆ ಸರಿಯಾದ ಉತ್ತರ ನೀಡಬೇಕು ಎಂದು ಪ್ರಧಾನಿಗಳನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ಅನಿತಾ ಬಾಯಿ ಮಾಲತೇಶ್, ತಾಲ್ಲೂಕು ಪಂಚಾಯತ್ ಸದಸ್ಯೆ ಆಶಾ ಮುರಳಿ, ಸಾಮಾಜಿಕ ಜಾಲತಾಣದ ಕೆ.ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ದಾವಣಗೆರೆ ಉತ್ತರ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥಸ್ವಾಮಿ, ಎನ್ ಎಸ್ ಯುಐ ಮುಜಾಹಿದ್, ಮಹಿಳಾ ಕಾಂಗ್ರೆಸ್ನ ಶುಭಮಂಗಳ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್, ಕಿಸಾನ್ ಘಟಕದ ಪ್ರವೀಣ್ ಕುಮಾರ್, ಮುಖಂಡರಾದ ಹುಲ್ಮನೆ ಗಣೇಶ್, ಅಜ್ಜಪ್ಪ ಪವಾರ್, ಬೆಳ್ಳೂಡಿ ಮಂಜುನಾಥ್, ಮುರಳಿ, ಗೋಪಾಲ್, ರವಿ, ದೀಪಕ್, ವಿಕಾಸ್, ಯುವರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.