ಕುಂಬಳೂರು : ಉಪ ತಹಶೀಲ್ದಾರ್ ರವಿ
ಮಲೇಬೆನ್ನೂರು, ಜೂ. 24- ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಕುಂಬಳೂರು ಗ್ರಾಮದ ಹಿರಿಯರೂ, ತಾ.ಪಂ. ಮಾಜಿ ಅಧ್ಯಕ್ಷರೂ ಆದ ಮಾಗಾನಹಳ್ಳಿ ಹಾಲಪ್ಪ ಅವರು ಸನ್ಮಾನಿಸಿ, ಪ್ರೋತ್ಸಾಹಿಸಿದರು.
ಉಪ ತಹಶೀಲ್ದಾರ್ ರವಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲಕ್ಷ್ಮೀದೇವಿ, ಗ್ರಾ.ಪಂ. ಪಿಡಿಓ ಆರ್. ಚಂದ್ರಶೇಖರಪ್ಪ, ಗ್ರಾ.ಪಂ. ಕಾರ್ಯದರ್ಶಿ ಹೆಚ್.ಎಸ್. ಸೋಮಶೇಖರ್, ಆಶಾ ಕಾರ್ಯಕರ್ತೆಯರಾದ ಸವಿತ, ಜಯಲಕ್ಷ್ಮಿ, ಶೋಭ, ಗೀತಮ್ಮ ಮತ್ತು ಆರೋಗ್ಯ ಸಹಾಯಕಿಯರಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿ ಇವರ ಸೇವೆಯನ್ನು ಪ್ರಶಂಸಿಸಲಾಯಿತು.
ಉಪ ತಹಸೀಲ್ದಾರ್ ರವಿ, ವೈದ್ಯಾಧಿಕಾರಿ ಡಾ. ಲಕ್ಷ್ಮೀದೇವಿ, ಪಿಡಿಓ ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರೂ ಕೊರೊನಾ ವಾರಿಯರ್ಸ್ ಆದಾಗ ಮಾತ್ರ ಕೊರೊನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತಿಯಿಂದಿರಬೇಕು. ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ವಚ್ಛತೆಗೆ ಕಡ್ಡಾಯವಾಗಿ ಒತ್ತು ನೀಡಬೇಕೆಂದು ಮನವಿ ಮಾಡಿದರು.
ಮಾಗಾನಹಳ್ಳಿ ಹಾಲಪ್ಪ, ಗ್ರಾ.ಪಂ. ಮಾಜಿ ಸದಸ್ಯ ಎಂ.ಹೆಚ್. ಶಿವರಾಮಚಂದ್ರಪ್ಪ, ಹೆಚ್. ಹನುಮಂತಪ್ಪ, ಪರಮೇಶ್ವರಪ್ಪ, ಮಹೇಂದ್ರ, ರಾಮೇಶ್, ವಾಸು, ಶರಣ್, ಅರುಣ್ ಮತ್ತಿತರರು ಈ ವೇಳೆ ಹಾಜರಿದ್ದರು.