ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್
ದಾವಣಗೆರೆ, ಜು. 5- ಮುಂಬರುವ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಹಾನಗರ ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರ ಹಣದ ಹಿನ್ನೆಲೆಯಲ್ಲಿ ಇಲ್ಲಿನ ವಿನೋಬನಗರ ದಲ್ಲಿರುವ ಶ್ರೀ ಸಿದ್ದಿವಿನಾಯಕ ಸಾಂಸ್ಕೃತಿಕ ಸಂಘದಲ್ಲಿ ಪಾಲಿಕೆ ವ್ಯಾಪ್ತಿಯ 22ನೆ ವಾರ್ಡ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಪ್ರತಿಜ್ಞಾ ವಿಧಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕೆಪಿಸಿಸಿಗೆ ಹೊಸ ಸಾರಥಿ ಬಂದಿದ್ದಾರೆ. ಅಲ್ಲದೇ, ದಾವಣಗೆರೆ ಜಿಲ್ಲೆಯಲ್ಲಿಯೂ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ ಎಂದರು.
ಬರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ವಿಧಾನಸಭೆ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಪಕ್ಷದ ಕಾರ್ಯಕರ್ತರನ್ನು ಸಂಘಟಿಸಬೇಕು. ಅವರಿಗೆ ತರಬೇತಿ ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೀರಪ್ಪ ಎಂ ಬಾವಿ, ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ರಾಜ್ಯ ಕಾನಿಪ ಜಿಲ್ಲಾ ಪ್ರತಿನಿಧಿ ಕೆ.ಚಂದ್ರಣ್ಣ, ಛಾಯಾಗ್ರಾಹಕ ವಿವೇಕ್ ಎಲ್. ಬದ್ದಿ ಮತ್ತಿತರರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ರವಿಸ್ವಾಮಿ, ಚಲುವಪ್ಪ, ಸಿದ್ದರಾಮೇಶ್, ಡಿ.ಕೆ. ರಮೇಶ್, ನಾಗರಾಜ್, ಪ್ರಸನ್ನ, ಮೀಸೆ ರಾಮಣ್ಣ, ಕಾಸೀಂಸಾಬ್, ಶುಭಮಂಗಳ, ಗೀತಮ್ಮ, ಮಂಜುಳಮ್ಮ, ಪೇಂಟರ್ ಶಂಕರ್, ರುದ್ರೇಶ್, ವೈ. ಮಂಜುನಾಥ್, ಕೃಷ್ಣಪ್ಪ, ಲೋಕೇಶ್, ನಾಗರಾಜ್ ಮತ್ತಿತರರು ಇದ್ದರು.