ದಾವಣಗೆರೆ,ಜು.5- ಕೊರೊನಾ ವೈರಸ್ ಭೀತಿಯ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸು ವುದರ ಮೂಲಕ ನಗರದ ಅಕ್ಕಮಹಾ ದೇವಿ ಪ್ರೌಢಶಾಲೆಯ ಆಡಳಿತ ಮಂಡಳಿಯಿಂದ ಬೀಳ್ಕೊಡಲಾಯಿತು.
ಪರೀಕ್ಷೆಯ ಕೊನೆಯ ದಿನದಂದು ಪರೀಕ್ಷೆಯನ್ನು ಎದುರಿಸಿದ ವಿದ್ಯಾರ್ಥಿಗಳಿಗೆ ಪುಷ್ಪ ವೃಷ್ಠಿ ಮಾಡುವುದರ ಮೂಲಕ ಶುಭ ಹಾರೈಸಲಾಯಿತು. ಇದೇ ಸಂದರ್ಭದಲ್ಲಿ ಪರೀಕ್ಷೆಗಳು ಯಶಸ್ವಿಯಾಗಿ ನಡೆಯುವಲ್ಲಿ ಶ್ರಮಿಸಿದ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು – ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಲಾಯಿತು.
ಅಕ್ಕಮಹಾದೇವಿ ಪ್ರೌಢಶಾಲೆಯ ಆಡಳಿ ಮಂಡಳಿ ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆ ಕಾರ್ಯದರ್ಶಿ ಮನೋಹರ ಎಸ್. ಚಿಗಟೇರಿ, ಸಹ ಕಾರ್ಯದರ್ಶಿ ಎಂ.ಕೆ.ಬಕ್ಕಪ್ಪ ಅವರುಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.