ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಎಸ್ಸೆಸ್ ಚಾಲನೆ

ದಾವಣಗೆರೆ, ಜು.9- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

ನಗರದ ಹೊಳೆಹೊನ್ನೂರು ತೋಟದಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಮತ್ತು ಹೊಳೆಹೊನ್ನೂರು ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಂದ್ರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಜಡಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಪ್ರಥಮ ಹಂತದಲ್ಲಿ 83 ಲಕ್ಷ ರೂ. ಬಿಡುಗಡೆ ಆಗಿದ್ದು, ಇದರಲ್ಲಿ 6 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೊರೊನಾ ವೈರಸ್‌ನಿಂದಾಗಿ ಇಂದು ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಈ ಕಾಮಗಾರಿಗಳು ಮುಕ್ತಾಯವಾಗುವು ದರೊಳಗೆ ಶಾಲೆಗಳು ಪ್ರಾರಂಭವಾಗಬಹುದು ಎಂದು ಅಭಿಪ್ರಾಯಪಟ್ಟ ಅವರು, ಕೊರೊನಾ ಮಹಾಮಾರಿ ಇಂದು ಕೇವಲ ನಗರ ಪ್ರದೇಶಗಳಿಗಷ್ಟೇ ಅಲ್ಲದೇ ಗ್ರಾಮಾಂತರ ಪ್ರದೇಶಗಳಿಗೂ ವ್ಯಾಪಿಸಿದ್ದು, ಸಾರ್ವಜನಿಕರು ಪರಸ್ಪರ ಅಂತರ ಹಾಗೂ ಮುಂಜಾಗ್ರತೆ ತೆಗೆದುಕೊಳ್ಳುವುದರ ಮೂಲಕ ವೈರಸ್ ನಿಂದ ದೂರವಿರಬೇಕು ಎಂದು ಎಸ್ಸೆಸ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಉದಯಕುಮಾರ್, ಜಿ.ಡಿ.ಪ್ರಕಾಶ್, ಇಟ್ಟಿಗುಡಿ ಮಂಜುನಾಥ್, ಜಿಲ್ಲಾ ಪಂಚಾ ಯತ್ ಸದಸ್ಯರಾದ ಜಿ.ಸಿ.ನಿಂಗಪ್ಪ, ಕೆ.ಹೆಚ್.ಓಬಳಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!