ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಗೆ ಆಗ್ರಹ

ದಾವಣಗೆರೆ, ಜು.10- ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 

ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಕೈಬಿಡುವಂತೆ ಮನವಿ ಸಲ್ಲಿಸಲಾಯಿತು.

ಭೂ ಒಡೆತನವು ಸೇರಿದಂತೆ ರೈತ ಹಾಗೂ ಕೃಷಿ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದ್ದ ಭೂ ಸುಧಾರಣಾ ಕಾಯ್ದೆಯು ಇಡೀ ದೇಶಕ್ಕೆ ಮಾದ ರಿಯಾಗಿತ್ತು. ರೈತರ, ಕಾರ್ಮಿಕರ ಪರವಾಗಿದ್ದ ಜನಪರ ಕಾಯ್ದೆಗೆ ತಿದ್ದುಪಡಿ ತರಲು ಮುಂದಾ ಗಿರುವ ರಾಜ್ಯ ಸರ್ಕಾರದ ಕ್ರಮವು ರೈತ ವಿರೋಧಿಯಾಗಿದ್ದು, ಬಂಡವಾಳ ಶಾಹಿ ಕಾರ್ಪೊರೇಟ್ ಕಂಪನಿಗಳ ಪರವಾದ ನಿಲುವಿ ನಿಂದ ಕೂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಹೂವಿನಮಡು ಅಂಜಿನಪ್ಪ, ರಾಜ್ಯ ಸಂಘಟನಾ ಸಂಚಾಲಕ ಕಬ್ಬಳ್ಳಿ ಮೈಲಪ್ಪ, ತಾಲ್ಲೂಕು ಸಂಚಾಲಕ ಗುಮ್ಮನೂರು ರಾಮಚಂದ್ರಪ್ಪ, ಪುಣಭಗಟ್ಟ ನಿಂಗಪ್ಪ, ರವಿ, ಆನಗೋಡು ಸುರೇಶ್, ಅಳಗವಾಡಿ ಬಾಬು, ಕೊಡಗನೂರು ಲಕ್ಷ್ಮಣ್, ವಾಸುದೇವ, ಪುಣಭಗಟ್ಟ ಮಂಜು, ಕೋಗಲೂರು ಪ್ರಕಾಶ್, ಆನಗೋಡು ಪ್ರಶಾಂತ್, ರಾಜು, ನಾಗನೂರು ರಾಜು, ಹೆದ್ನೆ ಮೂರ್ತಿ, ಕೋಲ್ಕುಂಟೆ ಚಂದ್ರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

error: Content is protected !!