ದಾವಣಗೆರೆ, ಜು.12 – ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಕಂಟೈನ್‍ಮೆಂಟ್ ವಲಯಗಳಲ್ಲಿ ಜು.30 ರವರೆಗೆ ಲಾಕ್‍ಡೌನ್ ವಿಸ್ತರಿಸಿ, ಕಂಟೈನ್‍ಮೆಂಟ್ ವಲಯ ಹೊರತುಪಡಿಸಿದ ಪ್ರದೇಶಗಳಲ್ಲಿ, ತೆರವು 2 ಕ್ಕೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇವುಗಳು ಜು.31 ರವರೆಗೆ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಪ್ರತ್ಯೆಕತೆಯನ್ನು ಅಳವಡಿಸಿಕೊಳ್ಳುವುದು ಅತಿ ಪ್ರಾಮುಖ್ಯವಾಗಿದೆ. ಬೃಹತ್ ಸಾರ್ವಜನಿಕ ಸಭೆ, ಸಮಾರಂಭಗಳನ್ನು, ಒಗ್ಗೂಡುವಿಕೆಯನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರಿಹರದಲ್ಲಿ ಜು.14 ಕುರಿ ಸಂತೆಯನ್ನು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.