ಕೊರೊನಾ ನಿಯಂತ್ರಣಕ್ಕೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ

ಹರಿಹರ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಬೀಳಗಿ ತಾಕೀತು

ಹರಿಹರ, ಜು.14- ನಗರದಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ರೋಗದ ಲಕ್ಷಣ ಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವು ದರಿಂದ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಿನ ಪ್ರಮಾಣದಲ್ಲಿ ಇರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರವೃತ್ತಿಯನ್ನು ಕೈ ಬಿಟ್ಟು ಕೊರೊನಾ ತಡೆಗಟ್ಟಲು ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಾಕೀತು ಮಾಡಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಇಂದು ಏರ್ಪಾಡಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಇಲ್ಲಿಯವರೆಗೆ ಎಷ್ಟು ಕೊರೊನಾ ಪ್ರಕರಣಗಳು ಬಂದಿವೆ ಮತ್ತು ಎಷ್ಟು ಜನ ಗುಣಮುಖರಾಗಿದ್ದಾರೆ. ಕಂಟೈ ನ್ಮೆಂಟ್ ಝೋನ್ ಪ್ರದೇಶಗಳು ಎಷ್ಟು, ಅಲ್ಲಿ ಯಾವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾ ಗಿದೆ. ಬ್ಯಾರಿಕೇಡ್ ಯಾವ ರೀತಿಯಲ್ಲಿ ಹಾಕಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಗುಣಮಟ್ಟ ಹೇಗಿದೆ. ಔಷಧಿ ಸರಬರಾಜು ಸರಿಯಾಗಿ ಇದೇನಾ ಮತ್ತು ಯಾವ ಸೌಕರ್ಯದ ಕೊರತೆ ಇದೆ. ಆಂಬ್ಯುಲೆನ್ಸ್ ವಾಹನಗಳು ಯಾವುದೇ ತುರ್ತು ಸಂದರ್ಭಗಳು ಬಂದರೂ ಓಡಾಡುವಂತೆ ಸಿದ್ಧತೆ ಸರಿಯಾಗಿ ಮಾಡಿ ಕ್ವಾರಂಟೈನ್‌ನಲ್ಲಿ ಇರುವ ವ್ಯಕ್ತಿಗಳಿಗೆ ಸರಿಯಾದ ಸಮಯಕ್ಕೆ ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆ ಬರದಂತೆ ನೋಡಿಕೊಳ್ಳುವುದು ಮತ್ತು ಸಮಯಕ್ಕೆ ಸರಿಯಾಗಿ ಊಟ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. 

ಜಿಲ್ಲಾಧಿಕಾರಿಗಳ ಭೇಟಿ : ನಂತರ ಕೊರೊನಾ ಸೋಂಕು ಹರಡಿರುವ ಗಾಂಧಿ ನಗರ ಮತ್ತು ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಸ್ಥಳಕ್ಕೆ ಭೇಟಿ ಕೊಟ್ಟು, ಈ ಬಡಾವಣೆಯಲ್ಲಿ ವಾಸವಾಗಿರುವ ಪ್ರತಿಯೊಬ್ಬ ವ್ಯಕ್ತಿಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ನೀಡಿದರು.

ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆ ತಡೆಯಲು ಕೆಲವು ವ್ಯಕ್ತಿಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಆದರೆ, ಆ ಸ್ಥಳದಲ್ಲಿ ನಿನ್ನೆ ಅವರಿಗೆ ಸರಿಯಾದ ಸಮಯಕ್ಕೆ ಊಟವನ್ನು ವಿತರಣೆ ಮಾಡಿಲ್ಲ ಎಂಬುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಮತ್ತು ವಿದ್ಯುತ್ ಬಲ್ಬ್ ಇಲ್ಲದೇ ಕತ್ತಲು ಕವಿದ ವಾತಾವರಣ  ಸೃಷ್ಟಿಯಾಗಿತ್ತು ಎನ್ನಲಾಗಿದೆ. ಇದನ್ನು ಗಮನಿಸಿದರೆ, ಆ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯುಂಟಾಗಿ ಅಧಿಕಾರಿಗಳು ಅವರ ಮೇಲೆ ಇವರು, ಇವರ ಮೇಲೆ ಅವರು ಹಾಕಿಕೊಂಡು ನಮಗೆ ಯಾವುದೇ ಸಂಬಂಧವಿಲ್ಲ ಎಂಬುವ ರೀತಿಯಲ್ಲಿ ವರ್ತನೆಗಳು ಕಂಡುಬರುತ್ತಿವೆ.  

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ಬಿ.ರಾಮಚಂದ್ರಪ್ಪ, ಪೌರಾಯುಕ್ತರಾದ ಶ್ರೀಮತಿ ಎಸ್.ಲಕ್ಷ್ಮಿ, ಆರೋಗ್ಯ ಅಧಿಕಾರಿ ಡಾ.ಚಂದ್ರ ಮೋಹನ್, ನಗರಸಭೆ ಎಇಇ ದಳವಾಯಿ, ಎಂ.ವಿ‌. ಹೊರಕೇರಿ ಇತರರು ಹಾಜರಿದ್ದರು.

error: Content is protected !!