7ನೇ ದಿನವೂ ಮುಂದುವರೆದ ‘ಆಶಾ’ ಹೋರಾಟ

ದಾವಣಗೆರೆ, ಜು.16- ತಮಗೆ ಮಾಸಿಕ 12 ಸಾವಿರ ರೂ. ಗೌರವ ಧನ ಖಾತರಿಪಡಿಸಬೇಕೆಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಕೈಗೊಂಡಿರುವ ಅನಿರ್ದಿಷ್ಟ ಹೋರಾಟ ಇಂದಿಗೆ 7 ದಿನಗಳನ್ನು ಪೂರೈಸಿದೆ.

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕರೆಯ ಮೇರೆಗೆ ಇಂದೂ ಸಹ ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಗರದ ತಹಶೀಲ್ದಾರ್ ಕಛೇರಿಯ ಮುಂಭಾಗ ಜಮಾಯಿಸಿದ್ದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ತಾಲ್ಲೂಕು ಅಧ್ಯಕ್ಷೆ ಭಾರತಿ , ರುಕ್ಕಮ್ಮ, ನಾಗರತ್ನ, ಫರ್ವೀನ್ ಭಾನು, ಲಕ್ಷ್ಮಿ, ಜುಬೇದ, ಯಶೋಧ, ಶೈಲ, ನಿರ್ಮಲ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

error: Content is protected !!