ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರ

ನೊಳಂಬ ವೀರಶೈವ-ಲಿಂಗಾಯತ ಯುವ ವೇದಿಕೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಎಂ.ಬಿ. ಚನ್ನೇಶ್

ಹೊನ್ನಾಳಿ, ಅ. 27 – ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರ. ಹಾಗಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ನೊಳಂಬ ವೀರಶೈವ-ಲಿಂಗಾಯತ ಯುವ ವೇದಿಕೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಎಂ.ಬಿ. ಚನ್ನೇಶ್ ಹೇಳಿದರು.

ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ತಮ್ಮ ನೇತೃತ್ವದಲ್ಲಿ ನಿರ್ಮಿಸಿದ ನೊಳಂಬ ವೀರಶೈವ-ಲಿಂಗಾಯತ ಯುವ ವೇದಿಕೆಯ ನಾಮಫಲಕ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.

ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಮಾಜದ ಅಭ್ಯುದಯಕ್ಕಾಗಿ ಬಹುವಾಗಿ ಶ್ರಮಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಅಭಿವೃದ್ಧಿ  ಪಥದಲ್ಲಿ ಸಾಗೋಣ. ಇತರರಿಗೆ ಮಾದರಿ ಯಾಗೋಣ ಎಂದು ತಿಳಿಸಿದರು.

ಸಂಘಟನೆ ಯಿಂದ ಸಮಾಜದ ಅಭಿವೃದ್ಧಿ ಸಾಧ್ಯ. ಆದ್ದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಯುವಜನತೆ ಸಂಘಟನೆಯ ಜವಾಬ್ದಾರಿ ಹೊತ್ತುಕೊಳ್ಳ ಬೇಕಿದೆ. ಏನೇ ಸಮಸ್ಯೆ ಬಂದರೂ ಹಿರಿಯರ ಸಹಕಾರ ಪಡೆದು ಸಮಾಜದ ಸಂಘಟನೆಗೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸೌಹಾರ್ದಯುತ ಬದುಕು ಸಾಗಿಸಬೇಕು. ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯ. ಹಾಗಾಗಿ, ಎಲ್ಲರೂ ಧರ್ಮ ಮಾರ್ಗದಲ್ಲಿ ನಡೆದು ಭಗವಂತನ ಅನುಗ್ರಹ ಹೊಂದಬೇಕು ಎಂದು ತಿಳಿಸಿದರು.

ತಾಪಂ ಸದಸ್ಯ ಸಿ.ಆರ್. ಶಿವಾನಂದ್, ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹೇಶ್ ಹುಡೇದ್, ತಾಲ್ಲೂಕು ರೈತ ಸಂಘ-ಹಸಿರು ಸೇನೆ ಅಧ್ಯಕ್ಷ ಎಚ್. ಕಡದಕಟ್ಟೆ ಎಂ.ಎಸ್. ಜಗದೀಶ್, ಚನ್ನವೀರಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!