ಜಗಳೂರು, ನ.3- ಪಟ್ಟಣದ ತಾಲ್ಲೂಕು ಕಚೇರಿ, ಮುಂಭಾಗದಲ್ಲಿರುವ ಮತ್ತು ನೂತನವಾಗಿ ನಿರ್ಮಾಣ ವಾಗಿರುವ ಬಸ್ ಸ್ಟ್ಯಾಂಡ್ ಹತ್ತಿರದ ಸುತ್ತಮುತ್ತಲಿನ ಫುಟ್‍ಪಾತ್ ಮೇಲೆ ಮತ್ತು ರಸ್ತೆ ಬದಿಯಲ್ಲಿರುವ ಗೂಡಂಗಡಿಗಳನ್ನು ಇಂದು ಪೊಲೀಸ್ ಹಾಗೂ ತಹಶೀಲ್ದಾರರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸುವಂತೆ 2017ರಲ್ಲಿ ಲೋಕಾಯುಕ್ತರಲ್ಲಿ ಒಂದು ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅಂಬೇಡ್ಕರ್ ವೃತ್ತದಿಂದ ರಸ್ತೆ ಅಗಲೀಕರಣ, ದ್ವಿಮುಖ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿಯಲ್ಲಿರುವುದರಿಂದ ತೆರವು ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ತಾಲ್ಲೂಕು ದಂಡಾಧಿಕಾರಿ ಡಾ.ನಾಗವೇಣಿ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಡಿ.ಬಣಕಾರ್. ಪೊಲೀಸ್ ಉಪ ನಿರೀಕ್ಷಕ ಉಮೇಶ್ ಬಾಬು ಮತ್ತು ಪೊಲೀಸ್ ಸಿಬ್ಬಂದಿಗಳು, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಜೆಸಿಬಿಯೊಂದಿಗೆ ಅಂಗಡಿಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.