ಬಾಡಾ ಗ್ರಾಮದ ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ
ದಾವಣಗೆರೆ, ನ. 28- ತಾಲ್ಲೂಕಿನ ಬಾಡಾ ಗ್ರಾಮದಲ್ಲಿ ಭದ್ರಾ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಆಂದೋಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಕಾಡಾ ಪ್ರಾಧಿಕಾರವನ್ನು ಮಾದರಿ ಪ್ರಾಧಿಕಾರವನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು, ಹಂತ ಹಂತವಾಗಿ ಜಾರಿಗೊಳಿಸುವುದಾಗಿ ಹೇಳಿದರು.
ಶೀಘ್ರವೇ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಅನುದಾನ ಬಿಡುಗಡೆಯಾಗಲಿದೆ. ರೈತರು ತಾಳ್ಮೆ ಯಿಂದ ವರ್ತಿಸಿ, ಪ್ರಬುದ್ಧತೆ ತೊರಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ರೈತರು ತಮ್ಮ ಭಾಗಗಳಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆಯೂ, ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದಿಂದ ಹೆಚ್ಚಿನ ಅನುದಾನ ಹಾಗೂ ಕಾಮಗಾರಿಗಳನ್ನು ನೀಡುವ ಮೂಲಕ ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಒತ್ತಾಯಿಸಿದರು.
ಜಿ.ಪಂ. ಸದಸ್ಯೆ ಶೈಲಜಾ, ರಾಜೇಂದ್ರ ಪೋದ್ದಾರ್, ಜಿ.ಆರ್.ಪ್ರಭಾಕರ್, ಜಿ.ಕೆ.ಅಣ್ಣಪ್ಪ , ಡಿ.ರವಿ, ಜಿ.ಎಸ್.ಹನುಮಂತಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಜಲ ಸಂಪನ್ಮೂಲ ಇಲಾಖೆ, ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ಹಾಗೂ ಬಾಡ ನೀರು ಬಳಕೆದಾರರ ಸಹಕಾರ ಸಂಘಗಳ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.