ಮಾನವ ಹಕ್ಕುಗಳನ್ನು ಗೌರವಿಸುವುದು ಮುಖ್ಯ : ನ್ಯಾ.ಕೆಂಗಬಾಲಯ್ಯ ಆಶಯ

ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚು

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ಪೊಲೀಸ್ ಇಲಾಖೆಯಲ್ಲಿ ಆಗುತ್ತಿದೆ. ಒಬ್ಬ ಆಪಾದಿತನ ವಿರುದ್ದ ಎಫ್‍ಐಆರ್ ಆದ ಮೇಲೆ ಪೊಲೀಸರು 24 ಗಂಟೆಗಳಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕು. ಬಂಧಿಸುವ ವೇಳೆ ಸಹ ಕೆಲ ನಿಯಮಗಳನ್ನು ಪೊಲೀಸರು ಅನುಸರಿಸಬೇಕು. ಬಂಧನದ ಬಗ್ಗೆ ಸಂಬಂಧಿಕರಿಗೆ ತಿಳಿಸಬೇಕು. ಆಪಾದಿತ ವಕೀಲರನ್ನು ನೇಮಕ ಮಾಡಲು ಕೋರಿದರೆ ಅದರ ವ್ಯವಸ್ಥೆ ಮಾಡಬೇಕು. ಕಾನೂನು ಬಾಹಿರವಾಗಿ ಆತನನ್ನು ಬಂಧನದಲ್ಲಿ ಇಡಬಾರದು. ಹೀಗೆ ಪೊಲೀಸರು ನಿಯಮಗಳನ್ನು ಪಾಲಿಸದಿದ್ದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. 

– ನ್ಯಾ. ಕೆಂಗಬಾಲಯ್ಯ.

ದಾವಣಗೆರೆ ಡಿ.19- ಪ್ರಸ್ತುತ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಸಾಮಾನ್ಯ ವಾಗಿದ್ದು, ಇದನ್ನು ಪ್ರಶ್ನಿಸಲು ಮತ್ತು ನ್ಯಾಯ ಪಡೆಯಲು ಮಾನವ ಹಕ್ಕುಗಳ ಬಗ್ಗೆ ತಿಳಿಯುವುದು ಹಾಗೂ ಇತರರ ಹಕ್ಕುಗಳನ್ನು ಗೌರವಿಸುವುದು ಮುಖ್ಯ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ಕೆಂಗಬಾಲಯ್ಯ ತಿಳಿಸಿದರು.

ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರ, ಹಳೇ ನ್ಯಾಯಾಲಯದ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಾನವ ಹಕ್ಕುಗಳ ವೇದಿಕೆ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ನಮ್ಮೆಲ್ಲರಿಗೂ ಸಮಾನ ವಾದ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳನ್ನು ಯಾರೂ ಕಸಿಯಬಾರದು ಹಾಗೂ ಹಕ್ಕುಗ ಳಿಗೆ ಚ್ಯುತಿ ತರಬಾರದು. ಮಾನವ ಹಕ್ಕುಗ ಳಿಗೆ ಚ್ಯುತಿ ಬಂದಲ್ಲಿ ಅದರ ವಿರುದ್ಧ ಕಾನೂ ನಿನ ಮೂಲಕ ನ್ಯಾಯಾಲಯದಲ್ಲಿ ನ್ಯಾಯ ಪಡೆಯಬಹುದಾಗಿದೆ ಎಂದು ಹೇಳಿದರು.

ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹೆಚ್.ಜಿ. ಉಮೇಶ್, ಮಹಿಳೆಯರು, ಮಕ್ಕಳು, ರೈತರು, ಕಾರ್ಮಿ ಕರ ಹಕ್ಕುಗಳಿಗೆ ಚ್ಯುತಿಯಾಗುತ್ತಿದೆ. ಜಾತಿ ನಿಂದನೆ ಕೂಡ ಮಾನವ ಹಕ್ಕುಗಳ ಉಲ್ಲಂಘ ನೆಯಾಗಿದ್ದು, ಈ ಬಗ್ಗೆ ಪ್ರಶ್ನಿಸುವ ಕ್ರಿಯೆ ನಶಿಸುತ್ತಿರುವುದು ವಿಷಾದನೀಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್. ಅರುಣ್ ಕುಮಾರ್ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿದರು.

ಒಂದನೇ ಹೆಚ್ಚುವರಿ ಹಿರಿಯ ಸಿವಿಲ್  ನ್ಯಾಯಾಧೀಶರಾದ ಪ್ರೀತಿ ಎಸ್. ಜೋಷಿ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವಿ. ಲಕ್ಷ್ಮಣ್, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ. ಲಿಂಗರಾಜ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!