ತ್ಯಾಗ, ಬಲಿದಾನ, ಹೋರಾಟದ ಪ್ರತಿಫಲವೇ ಸ್ವಾತಂತ್ರ್ಯ

ಹರಪನಹಳ್ಳಿ ಸ್ವಾತಂತ್ರ್ಯೋತ್ಸವದಲ್ಲಿ ಉಪ ವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್

ಹರಪನಹಳ್ಳಿ, ಆ.15- ತ್ಯಾಗ, ಬಲಿದಾನ, ಹೋರಾಟದ ಪ್ರತಿಫಲವೇ ನಮಗೆ ಸ್ವಾತಂತ್ರ್ಯ ದೊರಕಲು ಸಾಧ್ಯವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ನಾವು ಅಭಾರಿಯಾಗಿರಬೇಕು ಎಂದು ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಇಂದು ಆಯೋಜಿಸಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

 ಕೊರೊನಾ ಸಂಕಷ್ಟದಿಂದ ಅತ್ಯಂತ ಸರಳವಾಗಿ
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ. ಕೊರೊನಾ ತಡೆಗಟ್ಟುವಲ್ಲಿ ಶಾಸಕರು, ಅಧಿಕಾರಿಗಳು ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲರ ಸಹಕಾರದಿಂದ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾತನಾಡಿ, ದೇಶದ ಅನೇಕ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರರನ್ನು, ನಮ್ಮ ಗುರು-ಹಿರಿಯರನ್ನು ನೆನೆಯಬೇಕಾಗಿದೆ ಎಂದು ಹೇಳಿದರು.

ಹಲವಾಗಲು ಜಿಲ್ಲಾ ಪಂಚಾಯತಿ ಸದಸ್ಯೆ ಸುವರ್ಣ ಆರುಂಡಿ ನಾಗರಾಜ್ ಮಾತನಾಡಿ, ಭಾರತ ಎಲ್ಲಾ ನೋವು ನಲಿವುಗಳನ್ನೊಳಗೊಂಡ ಪುಣ್ಯ ಭೂಮಿಯಾಗಿದೆ. ಆದರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ದುಃಖದ ಸಂಗತಿ. ಇದು ಹೆಣ್ಣಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದರು.

ತಾಲೂಕು ಪಂಚಾಯ್ತಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯ ಡಿ. ಸಿದ್ದಪ್ಪ, ತಾ.ಪಂ.ಉಪಾಧ್ಯಕ್ಷ ಎಲ್.ಮಂಜ್ಯಾನಾಯ್ಕ, ತಹಶೀಲ್ದಾರ್ ಅನಿಲ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆಂಚನಗೌಡ, ಕಾರ್ಯ ನಿರ್ವಾಹಣಾಧಿಕಾರಿ ಅನಂತ್‌ರಾಜು, ಪುರಸಭೆ ಮುಖ್ಯಾಧಿಕಾರಿ ಬಿ.ಆರ್. ನಾಗರಾಜ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ ವೀರಭದ್ರಯ್ಯ,  ನೌಕರರ ಸಂಘದ ಅಧ್ಯಕ್ಷ ಕೆ. ಸಿದ್ದಲಿಂಗನಗೌಡ, ತಾ.ಪಂ. ಸದಸ್ಯ ಓ. ರಾಮಪ್ಪ, ಸರ್ಕಾರಿ ನೌಕರರ
ಸಂಘದ ರಾಜ್ಯ ಪರಿಷತ್ ಸದಸ್ಯ ಬಸವರಾಜ ಸಂಗಪ್ಪನವರ್, ಸಮಾಜ ಕಲ್ಯಾಣ ಅಧಿಕಾರಿ ಆನಂದ ಯು. ಡೊಳ್ಳಿನ
ಪುರಸಭೆ ಸದಸ್ಯರಾದ ಜಾಕೀರ್ ಹುಸೇನ್ ಎಂ.ಕೆ. ಜಾವೀದ್, ಕಿರಣ್ ಶಾನಭೋಗರ, ಮಂಜುನಾಥ ಇಜಂತರ್, ಶಿಕ್ಷಣ ಸಂಯೋಜಕ ಗಿರಜ್ಜಿ ಮಂಜುನಾಥ, ವೈದ್ಯಾಧಿಕಾರಿ ಡಾ.ಶಿವಕುಮಾರ್, ಅಗ್ನಿಶಾಮಕ ಅಧಿಕಾರಿ ರಾಮಪ್ಪ,  ಸಿಪಿಐ ಕೆ. ಕುಮಾರ್, ಪಿಎಸ್‌ಐ ಸಿ. ಪ್ರಕಾಶ್, ಅಪ್ಪಣ್ಣ ರೆಡ್ಡಿ, ಕೊಟ್ರೇಶ್, ಮಲ್ಲೇಶ್ ನಾಯ್ಕ, ಜಾತಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. 

error: Content is protected !!