ಹರಪನಹಳ್ಳಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ
ಹರಪನಹಳ್ಳಿ, ಸೆ.3- ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ದಿನಾಂಕ 6ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಜಗದ್ಗುರು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ರಾಜ್ಯ ಮಟ್ಟದ ಸಭೆ ಕರೆಯಲಾಗಿದೆ.
ಸಭೆಯಲ್ಲಿ ಶೇ. 7.5 ಮೀಸಲಾತಿ ಹೆಚ್ಚಳ. ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಸಚಿವಾಲಯ, ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಠ ಜಾತಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಮತ್ತು ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಜೊತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ರಾಜ್ಯದಿಂದ ನಿಯೋಗ ಹೋಗುವುದು ಮತ್ತು ಶ್ರೀಮಠದಲ್ಲಿ ಶ್ರೀ ಮಹರ್ಷಿ
ವಾಲ್ಮೀಕಿ ಮಂದಿರ ನಿರ್ಮಾಣ ಹಂತದಲ್ಲಿದ್ದು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದು ಸೇರಿದಂತೆ,
ಸಭೆಯಲ್ಲಿ ಶ್ರೀಗಳ ಅಪ್ಪಣೆಯ ಮೇರೆಗೆ ಬರುವ ಇನ್ನಿತರೆ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.
ಶ್ರೀ ಮಠಕ್ಕೆ ಸೇರಿದ ಸರ್ವೋದಯ ಶಿಕ್ಷಣ ಟ್ರಸ್ಟ್ (ಧಾರವಾಡ), ಇದರ ಅಂಗ ಸಂಸ್ಥೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ, ಬಸವರಾಜ ಹೊರಟ್ಟಿ ಅಕ್ರಮಗಳನ್ನು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದು.
ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಮತ್ತು ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು ಸೇರಿದಂತೆ, ಅನೇಕ ವಿಷಯಗಳನ್ನು ಚರ್ಚಿಸಲಾಗವುದು.
ಸಭೆಗೆ ತಾಲ್ಲೂಕಿನ ವಾಲ್ಮೀಕಿ ನಾಯಕ ಸಮಾಜದ ಪದಾಧಿಕಾರಿಗಳು, ಪರಿಶಿಷ್ಟ ಪಂಗಡದ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಲಹೆ-ಸೂಚನೆಗಳನ್ನು ನೀಡಿ ಸಭೆ ಯಶಸ್ವಿಗೊಳಿಸಬೇಕು ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ತಿಳಿಸಿದ್ದಾರೆ.