ತ್ಯಾವಣಿಗೆ, ಜ. 6- ಇಲ್ಲಿನ ಶ್ರೀನಿವಾಸ ಆಸ್ಪತ್ರೆ ಹಾಗೂ ವಿಕಾಸ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಿಕಾಸ ಸಂಸ್ಥೆಯ ಅಧ್ಯಕ್ಷರಾದ ಕೆ. ಮಹಾಲಕ್ಷ್ಮಿ, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ರಾಜ್ಯಾಧ್ಯಕ್ಷರಾದ ಪುಷ್ಪಲತಾ ಪವಿತ್ರ ರಾಜ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷ ಹೆಚ್.ಬಿ. ಕರಿಬಸಪ್ಪ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಿ.ಜಿ. ಶಿವಕುಮಾರ, ಶಾಲಾ ಮುಖ್ಯ ಶಿಕ್ಷಕ ಆರ್. ಶರಣಪ್ಪ ಮತ್ತು ಇತರರು ಉಪಸ್ಥಿತರಿದ್ದರು.