ದಾವಣಗೆರೆ, ಏ. 3- ಬಸವಾಪಟ್ಟಣ ಯೋಜನಾ ಕಚೇರಿ ವ್ಯಾಪ್ತಿಯ ಹರಲೀಪುರ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ 1,50,000 ರೂ ಸಹಾಯ ಧನ ನೀಡಲಾಯಿತು.
ದಾವಣಗೆರೆ ಜಿಲ್ಲಾ ನಿರ್ದೇಶಕರು, ಕಮಿಟಿಯ ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಲಾಯಿತು. ಸಿದ್ದಯ್ಯ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ರೇಖಾ ವಂದಿಸಿದರು. ಮೇಲ್ವಿಚಾರಕಿ ಶ್ರೀಮತಿ ಚಂದ್ರಪ್ರಭ ನಿರೂಪಿಸಿದರು.