ಅರಣ್ಯ ಒತ್ತುವರಿ ಸಲ್ಲದು

ಅರಣ್ಯ ಒತ್ತುವರಿ ಸಲ್ಲದು

ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್‌

ಹರಪನಹಳ್ಳಿ, ಜೂ.5- ಎಷ್ಟೇ ದೊಡ್ಡವರಾದರೂ ಅರಣ್ಯ ಒತ್ತುವರಿ ಸಲ್ಲದು. ಈಚೆಗೆ ಅರಣ್ಯ ಕಡಿಮೆಯಾಗುತ್ತಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ಅವರು ಪಟ್ಟಣದ ಹರಿಹರ ರಸ್ತೆಯ ಆಶ್ರಯ ಬಡಾವ ಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ದಲ್ಲಿ ಅರಣ್ಯ ಇಲಾಖೆ, ಜೇಸಿ ಸಂಸ್ಥೆ, ಪುರಸಭಾ ಕಾರ್ಯಾಲ ಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 ಗಿಡ ನೆಡುವುದು ವನಮಹೋತ್ಸವ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು ಎಂದು ಅವರು ಹೇಳಿದರು. ಯಾವುದೇ ಕಾರಣಕ್ಕೂ ಅರಣ್ಯ ಒತ್ತುವರಿಗೆ ಅವಕಾಶ ನೀಡಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ರಸ್ತೆ ಬದಿ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು. ಶಾಸಕರು ಕೆಲವೊಂದು ಸಸಿಗ ಳನ್ನು ನೆಟ್ಟರು ಹಾಗೂ ಸಸಿಗಳನ್ನು ಮಕ್ಕಳಿಗೆ ವಿತರಿಸಿದರು.

ಉಪವಿಭಾಗಾಧಿಕಾರಿ  ಟಿ.ವಿ.ಪ್ರಕಾಶ್, ತಹಶೀಲ್ದಾರ್ ಡಾ.ಶಿವಕುಮಾರ ಬಿರಾದಾರ, ವಲಯ ಅರಣ್ಯಾಧಿಕಾರಿ ಮಲ್ಲಪ್ಪ, ತೋಷನ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್, ಪುರಸಭಾ ಮಾಜಿ ಅಧ್ಯಕ್ಷ ಮಂಜುನಾಥ ಇಜಂತಕರ್, ಬಿಇಒ ಬಸವರಾಜಪ್ಪ, ತಾ.ಪಂ ಇಒ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್, ಎಸ್‌ಡಿಎಂಸಿ ಅಧ್ಯಕ್ಷ ಫಾರೂಕ್‌ ಬಾಷಾ, ಹುಲಿಕಟ್ಟಿ ಚಂದ್ರಪ್ಪ, ಮುಖ್ಯಶಿಕ್ಷಕ ಎಚ್.ಚಂದ್ರಶೇಖರಯ್ಯ, ಸಿದ್ದಲಿಂಗನಗೌಡ ಇತರರು ಹಾಜರಿದ್ದರು.

error: Content is protected !!