ಹರಿಹರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕೊಠಡಿ ಉದ್ಘಾಟನೆ

ಹರಿಹರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕೊಠಡಿ ಉದ್ಘಾಟನೆ

ಹರಿಹರ,ಸೆ. 30 – ತಾಲ್ಲೂಕಿನ ಗಂಗನರಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ. 10.00 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕೊಠಡಿಯನ್ನು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಶಾಸಕ ಬಿ.ಪಿ. ಹರೀಶ್, ಹರಿಹರ ಗ್ರಾಮಾಂತರದ ಬಿ.ಜೆ.ಪಿ. ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ಗ್ರಾ.ಪಂ. ಅಧ್ಯಕ್ಷ ಬಿ. ಉಮೇಶ್, ಉಪಾಧ್ಯಕ್ಷ ಶ್ರೀಮತಿ ನೇತ್ರಮ್ಮ ಡಿ.ವಿ.,  ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!