ಮಲೇಬೆನ್ನೂರು, ಜ. 25- ಇಲ್ಲಿನ ಶ್ರೀ ಬೀರಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪುರಸಭೆ ಮತ್ತು ನಾಡ ಕಛೇರಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಉಪ ತಹಶೀಲ್ದಾರ್ ಆರ್. ರವಿ ಅವರು ವಿದ್ಯಾರ್ಥಿಗಳಿಗೆ ಮತದಾನದ ಹಕ್ಕು ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಆರ್. ರಾಜಪ್ಪ, ಪುರಸಭೆ ಸದಸ್ಯ ಸಾಬೀರ್ ಅಲಿ, ಉಪನ್ಯಾಸಕರಾದ ತಿಪ್ಪಣ್ಣ ಕಬ್ಬಾರ್, ಶ್ರೀಮತಿ ಉಮಾ ಬಣಕಾರ್ ಮತ್ತಿತರರು ಈ ವೇಳೆ ಹಾಜರಿದ್ದರು.