ವೈದ್ಯಾಧಿಕಾರಿ ಡಾ.ನವ್ಯ
ಮಲೇಬೆನ್ನೂರು, ಫೆ.12- ದೇವರಬೆಳಕೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಕುಷ್ಠರೋಗ ವಿರೋಧಿ ದಿನ ಕಾರ್ಯಕ್ರಮವನ್ನು ದೇವರಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ನವ್ಯ ಮಾತನಾಡಿ, ಕುಷ್ಠ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಇದು ಚರ್ಮ ಹಾಗೂ ನರಕ್ಕೆ ಸಂಬಂಧಿಸಿದ ಕಾಯಿಲೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ಚರ್ಮಕ್ಕೆ ಸಂಬಂಧಿಸಿದ ಬಿಳಿ ಮಚ್ಚೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ತಾಲ್ಲೂಕು ಹಿರಿಯ ಅರೋಗ್ಯ ಮೇಲ್ವಿಚಾರಕ ಎಂ.ಉಮ್ಮಣ್ಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್, ಶಾಲೆಯ ಪ್ರಾಂಶುಪಾಲ ಪ್ರಶಾಂತ್ ರಾಜ್ ಮಾತನಾಡಿ, ಮಕ್ಕಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಅಜರುದ್ದೀನ್, ಸಿಬ್ಬಂದಿಗಳಾದ ಶ್ರೀಮತಿ ಲಕ್ಷ್ಮಿದೇವಿ, ಶ್ರೀಮತಿ ನಯನ ರೆಡ್ಡಿ, ಶ್ರೀಮತಿ ರೇಖಾ, ಪರಶುರಾಮಪ್ಪ ಹಾಗೂ ಆದರ್ಶ ಸೇರಿದಂತೆ ಆಶಾ ಕಾರ್ಯಕರ್ತೆಯರು, ಮುರಾರ್ಜಿ ಶಾಲೆಯ ಶಿಕ್ಷಕರು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಆದರ್ಶ ಕಾರ್ಯಕ್ರಮ ನಿರೂಪಿಸಿದರು.