ಹಾನಿಯಾದ ಮನೆಗಳಿಗೆ ಶೀಘ್ರದಲ್ಲೇ ಪರಿಹಾರ

ಹಾನಿಯಾದ ಮನೆಗಳಿಗೆ ಶೀಘ್ರದಲ್ಲೇ ಪರಿಹಾರ

ಹೊನ್ನಾಳಿ, ಮೇ 30- ತತ್‌ಕ್ಷಣವೇ ಹಾನಿಯಾಗಿರುವ  ಕುಟುಂಬಗಳ ಅಂದಾಜು ವೆಚ್ಚವನ್ನು ಸಿದ್ಧಪಡಿಸಿ ಅತೀ ಶೀಘ್ರದಲ್ಲೇ ಪರಿಹಾರ ದೊರಕುವಂತೆ ಅಗತ್ಯ ಕ್ರಮಗಳನ್ನು ಜರುಗಿಸಬೇಕೆಂದು ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಡಿ.ಎಸ್. ಸುರೇಂದ್ರ ಗೌಡ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಸೋಮವಾರ ರಾತ್ರಿ ಸುರಿದ ಮಳೆ-ಗಾಳಿಗೆ ಕುಂಕುವ ಗ್ರಾಮದಲ್ಲಿ ಮನೆಗಳ ಮೇಲೆ ಮರಗಳು, ಲೈಟ್ ಕಂಬಗಳು ಬಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಹಾನಿಯಾದ ಮನೆಗಳ ಮಾಲೀಕರಿಗೆ ಸಾಂತ್ವನ ಹೇಳಿದರು.

ಕರಿಬಸಪ್ಪ, ಬಸವರಾಜಪ್ಪ, ಮಾಲಾ, ರಾಜಶೇಖರ, ಹಾಲಸಿದ್ದಯ್ಯ ಇವರ ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿಯಾಗಿರುವುದಿಲ್ಲ. ಸ್ಥಳದಲ್ಲಿ ತಹಶೀಲ್ದಾರ್ ಆರ್.ವಿ.ಕಟ್ಟಿ, ಉಪತಹಶೀಲ್ದಾರ್ ಸವಿತಾ, ಆರ್‍ಐ ಸಂತೋಷ್, ವಿಎ ಪರಶುರಾಮ್, ಬೆಸ್ಕಾಂ ಎಇಇ ಶ್ರೀನಿವಾಸ್ ನಾಯ್ಕ್, ಪಿಡಿಒ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!