ಬಿಜೆಪಿ ರೈತ ಮೋರ್ಚಾದಿಂದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ

ಬಿಜೆಪಿ ರೈತ ಮೋರ್ಚಾದಿಂದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ

ಜಗಳೂರು, ಅ.7-ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಕೇಂದ್ರ ಬರ ಅಧ್ಯಯನ‌ ಮೂರನೇ ತಂಡಕ್ಕೆ ಮನವಿ ಸಲ್ಲಿಸಿದರು. ಬರ ಪೀಡಿತದಿಂದಾಗಿರುವ ಬೆಳೆ ನಷ್ಟದ ಪ್ರಮಾಣವನ್ನು ಆಂದಾಜಿಸಬೇಕು. ಕನಿಷ್ಠ ಒಂದು ಎಕರೆಗೆ ಕನಿಷ್ಠ 50 ಸಾವಿರ ರೂಪಾಯಿಗಳನ್ನು ಬರದ ಬೆಳೆ ನಷ್ಟ ಪರಿಹಾರ ನೀಡಬೇಕು.   ತಕ್ಷಣವೇ ಎಲ್ಲಾ ತಾಲ್ಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿ ಪ್ರಾರಂಭಿಸಬೇಕು. ಬರದಿಂದ ಬೆಳೆ ನಷ್ಟವಾಗಿರುವ ರೈತನ ಎಲ್ಲಾ ಸಾಲ ಮನ್ನಾ ಮಾಡಬೇಕು. ಪಶು, ಜಾನುವಾರುಗಳಿಗೆ ಮೇವಿನ ಪೂರೈಕೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಮೇವಿನ ಬ್ಯಾಂಕ್ ಸ್ಥಾಪನೆ ಮಾಡಬೇಕು.ಗ್ರಾಮೀಣ ಪ್ರದೇಶಗಳಲ್ಲಿ  ಕುಡಿಯುವ ನೀರಿನ ಅಭಾವವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್, ರೈತ ಮುಖಂಡರಾದ ಕೊಳೇನಹಳ್ಳಿ ಬಿ.ಎಂ. ಸತೀಶ್, ಧನಂಜಯ ಕಡ್ಲೇಬಾಳ್, ಅಣಜಿ ಗುಡ್ಡೇಶ್ ಮುಂತಾದವರು ಇದ್ದರು.

error: Content is protected !!