ಜಗಳೂರು, ಏ. 11 – ಪಟ್ಟಣದಲ್ಲಿಂದು ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಮುಸ್ಲಿಂ ಸಮಾಜದ ಹಿರಿಯರು, ಮುಖಂಡರು ಶಾಂತಿಯುತವಾಗಿ ಮೆರವಣಿಗೆಯಲ್ಲಿ ಈದ್ಗಾ ಮೈದಾನ ತಲುಪಿ ಪ್ರಾರ್ಥನೆ ಸಲ್ಲಿಸಿದರು.
ಶುಭಾಶಯ ಕೋರಿದ ಶಾಸಕರು ; ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಬಿ. ದೇವೇಂದ್ರಪ್ಪ ಅವರು, ರಂಜಾನ್ ಹಬ್ಬವು ಮುಸ್ಲಿಂ ಸಮುದಾಯಕ್ಕೆ ಪವಿತ್ರ ಹಬ್ಬವಾಗಿದ್ದು, ಉಳ್ಳವರು ಇಲ್ಲದವರಿಗೆ ನೀಡುವುದೇ ಹಬ್ಬದ ಸಂದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಶೀರ್ ಅಹಮದ್, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್. ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ಬಿ. ಮಹೇಶ್ವರಪ್ಪ, ಪಟ್ಟಣ ಪಂಚಾಯತಿ ಸದಸ್ಯ ಶಕೀಲ್, ಮಹಮ್ಮದ್ ಆಲಿ ಲುಕ್ಮಾನ್. ಇಕ್ಬಾಲ್ ಅಹಮದ್, ಖಲಂದರ್ ಖಾನ್, ಅನ್ವರ್ ಸಾಬ್. ಇಮಾಮ್ ಅಲಿ ಮತ್ತಿತರರಿದ್ದರು.