ಕೊಟ್ಟೂರು, ಮೇ 19 – ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಬೇಕು ಎನ್ನುವ ಬಹುದಿನದ ಬೇಡಿಕೆ ಹಾಗೆಯೇ ಉಳಿದಿದೆ.
ಈಗಾಗಲೇ ಎರಡೂ ಬಾರಿ ಇನ್ನೇನು ಪ್ರಾರಂಭವಾಗಬೇಕೆಂಬುವ ಆಶಯ ಹೊತ್ತ ಕೊಟ್ಟೂರು ಹಾಗೂ ಸುತ್ತಮುತ್ತಲಿನ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸರ್ಕಾರ ನಿರಾಸೆಗೊಳಿಸಿದೆ.
ಕೊಟ್ಟೂರು ತಾಲ್ಲೂಕಿನಲ್ಲಿ ಹಲವು ಸಂಘಟ ನೆಗಳು ಪದವಿ ಪೂರ್ವ ಕಾಲೇಜ್‌ಗೆ ಶಿಫಾರಸ್ಸು ಮಾಡಿದ್ದರೂ ಜನಪ್ರತಿನಿಧಿಗಳು ಕಾಲೇಜು ಆರಂಭಕ್ಕೆ ಮೀನಮೇಷ ಎಣಿಸುತ್ತಿದ್ದಾರೆ. ಶೀಘ್ರವೇ ಕಾಲೇಜು ಆರಂಭಿಸಬೇಕು. ತಾಲ್ಲೂಕು ಕೇಂದ್ರವಾಗಿ ಹಲವು ದಿನಗಳು ಕಳೆದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ನೆರೆಯ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ. ಅನಿವಾರ್ಯ ವಾಗಿ ಕೆಲ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳ ಮೊರೆ ಹೋಗಿದ್ದಾರೆ. ನಿತ್ಯ ಓಡಾಟವೇ ದಿನಚರಿಯಾಗಿದೆ. ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಅನೇಕ ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಮಂಜೂರಾತಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ವಾಗಿಲ್ಲ. ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾಲೇಜು ಆರಂಭ ನನೆಗುದಿಗೆ ಬಿದ್ದಿದೆ. ಕೂಡಲೇ ಸರ್ಕಾರ ಕಾಲೇಜು ಆರಂಭಕ್ಕೆ ಮುಂದಾಗಬೇಕು ಎಂದು ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ಕೆ. ರೇಣುಕಮ್ಮ ಒತ್ತಾಯಿಸಿದರು.