ಕೊಟ್ಟೂರು, ಜ.13- ಕ್ಷೇತ್ರದ ಎಲ್ಲ ಗ್ರಾಮಗಳ ರೈತರಿಗೆ ಹೆಚ್ಚಿನ ರೀತಿಯಲ್ಲಿ ಮೂಲ ಸೌಕರ್ಯ ಒದಗಿ ಸುವ ಸಂಕಲ್ಪ ನನ್ನದಾಗಿದೆ. ಹಗರಿಬೊಮ್ಮನಹಳ್ಳಿ ಎಸ್.ಸಿ ಮೀಸಲುಕ್ಷೇತ್ರವಿದ್ದು, ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಜಿ.ಪಂ. ಮಾಜಿ ಪ್ರಭಾರ ಅಧ್ಯಕ್ಷರಾದ ಬಿಜೆಪಿಯ ದೀನಾ ಮಂಜುನಾಥ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ಪ್ರಭಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ ಎಂದರು.
January 18, 2025