ರಾಣೇಬೆನ್ನೂರು, ಆ. 21 – ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 105 ನೇ ಜನ್ಮ ದಿನೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಶಾಸಕ ಅರುಣಕುಮಾರ ಪೂಜಾರ ಉದ್ಘಾಟಿಸಿದರು.
ಅರಸು ಅವರು ಧ್ವನಿ ಇಲ್ಲದವರಿಗೆ ಧ್ವನಿ ನೀಡಿದರು. ಅಧಿಕಾರ ಅಂತಸ್ತಿನಲ್ಲಿ ಎಲ್ಲರಿಗೂ ಸಮಾನತೆ ನೀಡಿದ ಹರಿಕಾರ. ಅವರ ಸ್ಮರಣೆ ನಮ್ಮೆಲ್ಲರ ಕರ್ತವ್ಯ ಎಂದು ಶಾಸಕರು ಹೇಳಿದರು.
ಉತ್ತರ ಕರ್ನಾಟಕದ ಜನರಿಗೆ ಎಲ್ಲಾ ರೀತಿಯಲ್ಲೂ ಅವಕಾಶ ಕಲ್ಪಿಸಿ ನಾಡಿನಲ್ಲಿದ್ದ ಅಸಮಾನತೆಯನ್ನು ಕಡಿಮೆ ಮಾಡುವ ಪ್ರಯತ್ನ ನಡೆಸಿದ ಧೀಮಂತ ನಾಯಕ ದೇವರಾಜ ಅರಸು ಅವರು ಎಂದು ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ ಹೇಳಿದರು
ಕಾರ್ಯಕ್ರಮದಲ್ಲಿ ತಾ.ಪಂ. ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರಿಮ ಹೊನ್ನಾಳಿ, ಜಿ.ಪಂ. ಸದಸ್ಯೆ ಮಂಗಳಗೌರಿ ಪೂಜಾರ, ಈ.ಓ.ಎಸ್.ಎಂ. ಕಾಂಬಳೆ, ಪೌರಾಯುಕ್ತ ಡಾ. ಮಹಾಂತೇಶ, ಇಲಾಖಾಧಿಕಾರಿ ಎಸ್.ಎಸ್. ಹಿರೇಮಠ ಮುಂತಾದವರಿದ್ದರು. ಹೆಚ್ಚು ಅಂಕ ಪಡೆದ ವಸತಿ ನಿಲಯದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.