ಗ್ರಾಮದ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ

ಮಾನ್ಯರೇ,

ಗ್ರಾಮದ ಶುಚಿತ್ವಕ್ಕೆ ಆದ್ಯತೆ ನೀಡುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ಅಸಡ್ಡೆ ತೋರುತ್ತಿವೆ. ಶುಚಿತ್ವಕ್ಕೆ ಆದ್ಯತೆ ನೀಡದ ಗ್ರಾಮ ಪಂಚಾಯಿತಿ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು.

ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಲಕ್ಷ್ಯ ಆಡಳಿತ ಮಾಡುತ್ತಿರುವ ಪರಿಣಾಮ ಹಲವು ಗ್ರಾಮಗಳಲ್ಲಿನ ಚರಂಡಿಗಳು ವರ್ಷಕ್ಕೆ 2 ಬಾರಿ ಶುಚಿತ್ವ ಗೊಳ್ಳುತ್ತಿರುವುದು ಬೇಸರದ ಸಂಗತಿ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ.

– ಎಸ್.ಎಚ್‌. ಷಣ್ಮುಖ, ಹಳೇಬಾತಿ.

error: Content is protected !!