ನಗರದಲ್ಲಿ ಇಂದು ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದಿಂದ ವಿವಿಧ ಸ್ಪರ್ಧೆಗಳು
ಇಂದು ಸಂಜೆ 4 ಗಂಟೆಗೆ ಬ್ರಾಹ್ಮಣ ಸಮಾಜ ವಿದ್ಯಾರ್ಥಿ ನಿಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಬ್ರಾಹ್ಮಣ ಸಮಾಜದ ಮಹಿಳೆಯರಿಗಾಗಿ ಏರ್ಪಡಿಸಲಾಗಿದೆ ಎಂದು ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ನಳಿನಿ ಅಚ್ಯುತ್ ತಿಳಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬ್ರಾಹ್ಮಣ ಸಮಾಜ ವಿದ್ಯಾರ್ಥಿ ನಿಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಬ್ರಾಹ್ಮಣ ಸಮಾಜದ ಮಹಿಳೆಯರಿಗಾಗಿ ಏರ್ಪಡಿಸಲಾಗಿದೆ ಎಂದು ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ನಳಿನಿ ಅಚ್ಯುತ್ ತಿಳಿಸಿದ್ದಾರೆ.
ಅಂತರ ಕಾಲೇಜು ಸ್ಪರ್ಧೆಗಳು – `ಪಾರ್ವತಿ ಕಲೋತ್ಸವ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಧ.ರಾ.ಮ ವಿಜ್ಞಾನ ಕಾಲೇಜಿನ ಡಾ. ಎಸ್.ಎಸ್. ಸೆಮಿನಾರ್ ಹಾಲ್‌ನಲ್ಲಿ ಇಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ
ಶ್ರೀ ಕ್ಷೇತ್ರ ಆನೆಕೊಂಡದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ಕ್ಷೇತ್ರ ನೀಲಾನಹಳ್ಳಿಯ ಶ್ರೀ ಆಂಜನೇಯ ಸ್ವಾಮಿಗಳ ರಥೋತ್ಸವವು ನಾಡಿದ್ದು ದಿನಾಂಕ 14ರ ಶುಕ್ರವಾರ ರಾತ್ರಿ 10.30ಕ್ಕೆ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರು ಅಜ್ಜಪ್ಪ ತಿಳಿಸಿದ್ದಾರೆ.
ಸ್ಥಳೀಯ ತರಳಬಾಳು ನಗರದವರಾದ ಜರೇಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಎ.ಆರ್. ಇಂದಿರಾ ಸಿದ್ದೇಶ್ ಅವರಿಗೆ ಅವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಅಕ್ಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೌಢ್ಯವನ್ನೇ ಮೌಲ್ಯಗಳನ್ನಾಗಿ ಬಿತ್ತುತ್ತಿರುವ ಇಂದಿನ ವ್ಯವಸ್ಥೆ ಬದಲಾಗಬೇಕಾದರೆ ನಿರಂತರ ಹೋರಾಟ, ಸಮಾವೇಶ, ಮುಕ್ತ ಚರ್ಚೆಗಳ ಅಗತ್ಯವಿದೆ ಎಂದು ಡಿ.ಆರ್.ಎಂ. ಕಾಲೇಜು ನಿವೃತ್ತ ಪ್ರಾಂಶುಪಾಲ ಕೆ.ಎಸ್. ಈಶ್ವರಪ್ಪ ಪ್ರತಿಪಾದಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ಇದೇ ಮಾ. 15 ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಐದು ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.
ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆ ಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ 300 ರೂ. ನೀಡಲಾಗುತ್ತಿದೆ. ಇದರಿಂದ ಮೂಲಭೂತ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ. ಆದ್ದರಿಂದ ಪಿಂಚಣಿ ಮೊತ್ತ ಏರಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು
ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ಶ್ರೀಮತಿ ವೇಲಾ ದಾಮೋದರ್ ಖೋಡೆ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಲೇಬೆನ್ನೂರು : ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳೇ ತಯಾರು ಮಾಡಿದ ವಿಜ್ಞಾನ ವಸ್ತುಗಳ ಪ್ರದರ್ಶನ ನಡೆಯಿತು.
ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ಮಾ.12ರ ಇಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಚಂದ್ರ ತಿಳಿಸಿದ್ದಾರೆ.
ನಗರದ ದಕ್ಷಿಣ ವಲಯದ ಎಸ್ಓಜಿ ಕಾಲೋನಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾರದಾ ಪೂಜೆ ನಡೆಯಿತು.
ಮಕ್ಕಳ ಆಲೋಚನೆ ಹಾಗೂ ಅವರ ಆಸಕ್ತಿಯನ್ನು ಪಾಲಕರು ಗುರುತಿಸಿ, ಸಹಕಾರ ನೀಡಬೇಕು. ಆಗ ಮಕ್ಕಳ ಭವಿಷ್ಯ ಉಜ್ವಲ ವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಲತಾ ಹೇಳಿದರು.