Tag: ಮಲೇಬೆನ್ನೂರು

Home ಮಲೇಬೆನ್ನೂರು

ಯಲವಟ್ಟಿ : ಮುಖ್ಯಶಿಕ್ಷಕ ರವೀಂದ್ರಚಾರಿ ವಯೋನಿವೃತ್ತಿ

ಮಲೇಬೆನ್ನೂರು : ಯಲವಟ್ಟಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿಗಳಿಯ ರವೀಂದ್ರಚಾರಿ ಅವರು ಸೇವೆಯಿಂದ ವಯೋನಿವೃತ್ತಿ ಹೊಂದಿದರು.

ಸದೃಢ ಸಮಾಜಕ್ಕಾಗಿ ಸದೃಢ ಆರೋಗ್ಯ ಮುಖ್ಯ

ಮಲೇಬೆನ್ನೂರು : ಪಟ್ಟಣದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶ್ರೀಮತಿ ವಿಜಯಲಕ್ಷ್ಮಿ ಗಂಗಾಧರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಲೇಬೆನ್ನೂರಿನ ಪಿಎಸಿಎಸ್ ಅಧ್ಯಕ್ಷರಾಗಿ ಮಂಜುನಾಥ್ ಪಟೇಲ್

ಮಲೇಬೆನ್ನೂರು : ಇಲ್ಲಿನ ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರ ಸಂಘದ  ಅಧ್ಯಕ್ಷರಾಗಿ ಕೊಮಾರನಹಳ್ಳಿಯ ಜಿ.ಮಂಜುನಾಥ್ ಪಟೇಲ್ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಂದಿತಾವರೆ : ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ

ಮಲೇಬೆನ್ನೂರು : ನಂದಿತಾವರೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಕ್ಷೇತ್ರದಲ್ಲಿ ಆಗಬೇಕಾದ ಯೋಜನೆಗಳ ಜಾರಿಗೆ ಹೋರಾಟ

ಮಲೇಬೆನ್ನೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಮಂಗಳವಾರ ಸಾಯಂಕಾಲ ದಾವಣಗೆರೆ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗಮಿಸಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಅವರ ಆಶೀರ್ವಾದ ಪಡೆದರು.

ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ

ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮ ವಾರ ಕಾಗಿನೆೆಲೆ ಕನಕಗುರು ಪೀಠದ ಬೆಳ್ಳೂಡಿ ಶಾಖಾ ಮಠಕ್ಕೆ ಆಗಮಿಸಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ  ಆಶೀರ್ವಾದ ಪಡೆದರು. 

2025 ರೊಳಗೆ ಮಲೇರಿಯಾಮುಕ್ತ ಭಾರತಕ್ಕೆ ಸಮುದಾಯದ ಪಾತ್ರ ಮುಖ್ಯ

ಮಲೇಬೆನ್ನೂರು : ಕೊಕ್ಕನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಟಿಹೆಚ್‌ಓ ಡಾ. ಅಬ್ದುಲ್ ಖಾದರ್ ಉದ್ಘಾಟಿಸಿದರು.

ಪಂಚಮಸಾಲಿ ಪೀಠಕ್ಕೆ ಸಂಸದೆ ಪ್ರಿಯಾಂಕ ಭೇಟಿ

ಮಲೇಬೆನ್ನೂರು : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಜಾರಕಿಹೊಳಿ ಹಾಗೂ ಅವರ ಸಹೋದರ ರಾಹುಲ್ ಜಾರಕಿಹೊಳಿ ಅವರು ಹನಗವಾಡಿ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ವಚನಾನಂದ ಶ್ರೀಗಳ ಆಶೀರ್ವಾದ ಪಡೆದರು.

45ನೇ ವಸಂತಕ್ಕೆ ಕಾಲಿಟ್ಟ ರಾಜನಹಳ್ಳಿ ಶ್ರೀಗಳು

ಮಲೇಬೆನ್ನೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ತಮ್ಮ ಸಾರ್ಥಕ ಬದುಕಿನ 44 ವರ್ಷಗಳನ್ನು ಪೂರೈಸಿ, ಮಂಗಳವಾರ 45ನೇ ವಸಂತಕ್ಕೆ ಕಾಲಿಟ್ಟರು.

ಗ್ರಾ.ಪಂ. ಅಧ್ಯಕ್ಷರಾಗಿ ಮಂಜನಗೌಡ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎನ್.ಜಿ. ಮಂಜನಗೌಡ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಶಾಂತಿ, ಸೌಹಾರ್ದಯುತವಾಗಿ ಬಕ್ರೀದ್‌ ಆಚರಿಸಿ

ಮಲೇಬೆನ್ನೂರು : ನಾಳೆ ಸೋಮವಾರ ಜರುಗುವ ಬಕ್ರೀದ್‌ ಹಬ್ಬವನ್ನು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಕಾನೂನಿನ ಚೌಕಟ್ಟಿನಲ್ಲಿ ಆಚರಿಸಿ ಎಂದು ಪಿಎಸ್‌ಐ ಪ್ರಭು ಕೆಳಗಿನಮನಿ ಪಟ್ಟಣದ ಮುಸ್ಲಿಂ ಜನತೆಗೆ ಮನವಿ ಮಾಡಿದರು.

error: Content is protected !!