ಭೂಮಿ ಉಳಿಸಿಕೊಳ್ಳಲು ರೈತರಿಂದ ಪಾದಯಾತ್ರೆ, ಬೃಹತ್ ಪ್ರತಿಭಟನೆ
ಜಗಳೂರು : ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಬಗರ್‌ಹುಕ್ಕುಂ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.