ಪುರಾಣ ಪ್ರವಚನದಲ್ಲಿ ಕಲಾವಿದರಿಗೆ ಸನ್ಮಾನ
ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 20 ಜನರ ತಂಡ ತಬಲಾ ಸೋಲೋ ನಡೆಸಿದರು.
ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 20 ಜನರ ತಂಡ ತಬಲಾ ಸೋಲೋ ನಡೆಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ. ಕೊಳ್ಳ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ.
ನಗರದಲ್ಲಿ ಅನುಮತಿ ಪಡೆಯದೇ ನಡೆಸುವ ಕೋಚಿಂಗ್ ಸೆಂಟರ್ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಪೋಷಕರು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳ ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸು ಇಂದಿಗೂ ನನಸಾಗಿಲ್ಲ. ಇದು ಅತ್ಯಂತ ನೋವಿನ ಸಂಗತಿ. ನೇತಾಜಿಯವರ ಎಚ್ಚರಿಕೆಗಳಿಗೆ ಅಂದೇ ಗಮನ ಕೊಟ್ಟಿದ್ದಿದ್ದರೆ, ಬ್ರಿಟಿಷರಿಂದ ಶ್ರೀಮಂತ ಭಾರತೀಯ ಬಂಡವಾಳಶಾಹಿಗಳಿಗೆ ಅಧಿಕಾರ ವರ್ಗಾವಣೆಯಾಗುವ ದುರಂತವನ್ನು ತಪ್ಪಿಸಬಹುದಿತ್ತು
ಶಾಸಕ ಶಾಮನೂರು ಶಿವಶಂಕರಪ್ಪರ ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲೆಂದು ಮಹಾನಗರ ಪಾಲಿಕೆ 38ನೇ ವಾರ್ಡ್‌ನ ಸದಸ್ಯ ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ದೇವರ ದರ್ಶನ ಪಡೆಯಲಾಯಿತು.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ಗುಣಮುಖರಾಗಿ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರ ದೇವತೆ ದುರ್ಗಾಂಬಿಕಾ ದೇವಿಗೆ 101 ಕಾಯಿ ಒಡೆಯುವ ಮೂಲಕ ಎಸ್.ಎಸ್ ಯುವ ಅಭಿಮಾನಿ ಬಳಗ ಹರಕೆ ತೀರಿಸಿತು.
ನಗರದ ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನ ಆಚರಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ನೂತನ ಪದಾಧಿಕಾರಿಗಳನ್ನು ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಆಯ್ಕೆ ಮಾಡಿದ್ದಾರೆ.
ಇದೇ ಫೆ. 1 ರಂದು ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ದಾವಣಗೆರೆ 11ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ (ಹೆಚ್‌ಕೆಆರ್ ಬಣ)ದ ವತಿಯಿಂದ ನಾಳೆ ದಿನಾಂಕ 24 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ
ಮುಡಾ ಹಗರಣದಲ್ಲಿ ಸಿ.ಎಂ. ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿಂದ ಸತ್ಯಕ್ಕೆ ಜಯ ದೊರಕಿದೆ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಪ್ರವೀಣ್ ಕುಮಾರ್ ತಿಳಿಸಿದ್ದಾರೆ.