Tag: ಹಾವೇರಿ

Home ಹಾವೇರಿ

ಹಾವೇರಿ ಬಳಿ ಅಪಘಾತ: 13 ಮಂದಿ ಸಾವು

ಹಾವೇರಿ : ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ 4 ಗಂಟೆ ಸುಮಾರಿನಲ್ಲಿ ನಡೆದ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ಹಾವೇರಿ : ಅಗಡಿ ಶೇಷಾಚಲ ಪ್ರೌಢಶಾಲೆ ಸುವರ್ಣ ಮಹೋತ್ಸವಕ್ಕೆ ಸಿದ್ದತೆ

ಹಾವೇರಿ : ತಾಲ್ಲೂಕಿನ ಅಗಡಿ ಶ್ರೀ ಶೇಷಾಚಲ ಸದ್ಗುರು ಪ್ರೌಢ ಶಾಲೆ ಪ್ರಾರಂಭಿಸಿ 50 ವರ್ಷಗಳಾಗಿದ್ದು, ಬರುವ ನವೆಂಬರ್‌ ಅಥವಾ ಡಿಸೆಂಬರ್ ತಿಂಗಳಲ್ಲಿ ಸುವರ್ಣ ಮಹೋತ್ಸವ ಸಮಾರಂಭವನ್ನು ಆಡಂಬರಕ್ಕಿಂತ ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ

ದೇಶದ ಉಳಿವಿಗಾಗಿ ಮೋದಿ ಪರಿವಾರ ಕೆಳಗಿಳಿಸಬೇಕು : ನಟ ಪ್ರಕಾಶ್‌ ರಾಜ್‌

ಹಾವೇರಿ : ಭಾರತ ದೇಶ ಕಳೆದ 10 ವರ್ಷಗಳಿಂದ ಆತಂಕವಾದಿಗಳ ಕೈಯಲ್ಲಿದೆ. ಮೋದಿ ಮತ್ತು ಅವರ ಪರಿವಾರವನ್ನು ಈ ಬಾರಿ ಕೆಳಗಿಳಿಸಲು ಎಲ್ಲಾ ರೈತ ಸಂಘಟನೆಗಳು, ಪ್ರಗತಿಪರ, ದಲಿತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಒಂದಾಗಬೇಕೆಂದು ಖ್ಯಾತ ಬಹುಭಾಷಾ ನಟ, ದಿಟ್ಟ ನಿಲುವಿನ ಪ್ರಗತಿಪರ ಚಿಂತಕ ಪ್ರಕಾಶ್ ರಾಜ್ ಕರೆ ನೀಡಿದರು. 

ಮೆಣಸಿನಕಾಯಿ ದರ ದಿಢೀರ್‌ ಕುಸಿತ : ರೈತರಿಂದ ವಾಹನಗಳಿಗೆ ಬೆಂಕಿ

ಹಾವೇರಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿ, ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಶ್ರೀಶೈಲ, ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ

ಹಾವೇರಿ : ಶಿಗ್ಗಾವಿ ತಾಲ್ಲೂಕು ಬಿಸನಳ್ಳಿ ಗ್ರಾಮದ ಶ್ರೀ ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಸಂಗೀತ ಮತ್ತು ಜ್ಯೋತಿಷ್ಯ ಪಾಠಶಾಲೆಯ ದಶಮಾನೋತ್ಸವದ 5ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಮದ್ ಶ್ರೀಶೈಲ ಜಗದ್ಗುರು ಹಾಗೂ ಕಾಶಿ ಪೀಠದ ಕಿರಿಯ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ನಿನ್ನೆ ಜರುಗಿತು.

ಸ್ವಾತಂತ್ರ್ಯ ಹೋರಾಟಗಾರ ಕುಟುಂಬಸ್ಥರ ಸತ್ಯಾಗ್ರಹ

ಹಾವೇರಿ : ಇದೇ ದಿನಾಂಕ 12ರಂದು ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರ ಬೇಡಿಕೆಗಳನ್ನು ಈಡೇರಿಸುವಂತೆ  ಒತ್ತಾಯಿಸಿ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಉತ್ತರಿಸಲು ಸಿದ್ಧರಿದ್ದೇವೆ : ಸಿಎಂ

ಹಾವೇರಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು

ಹಾವೇರಿ : ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ, ನಾಲ್ವರ ಸಾವು

ಹಾವೇರಿ : ಜಿಲ್ಲೆಯ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದು, ಗೋದಾಮಿನ ಪಕ್ಕದಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲೆದೇವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ವೀರಣ್ಣ ಹಿರೇಮಠ, ಉಪಾಧ್ಯಕ್ಷರಾಗಿ ಪುಷ್ಪ

ಹಾವೇರಿ : ಬ್ಯಾಡಗಿ ತಾಲ್ಲೂಕಿನ ಕಲ್ಲೆದೇವರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವೀರಣ್ಣ ಹಿರೇಮಠ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಹನುಮಂತಪ್ಪ ನೇಕಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಯಕದಿಂದ ಬದುಕು ಉಜ್ವಲ

ಹಾವೇರಿ : ಕೆಲಸ ಮಾಡಲು ಮನಸ್ಸಿದ್ದರೆ ಮಾರ್ಗಗಳು ಕಾಣುತ್ತವೆ. ಮನಸ್ಸಿಲ್ಲದಿದ್ದರೆ ನೂರಾರು ನೆಪಗಳು ಮುಂದೆ ಬರುತ್ತವೆ. ಕಾಯಕದಿಂದ ಮನುಷ್ಯನ ಬದುಕು ಉಜ್ವಲಗೊಳ್ಳುವುದೆಂದು ಶ್ರೀ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

‘ಭಾರತ ಜನನಿಯ ತನುಜಾತೆ’ ಅಜರಾಮರ ಗೀತೆಯಾಗಿದೆ

ಹಾವೇರಿ : ಕುವೆಂಪು ಅವರು ರಚಿಸಿರುವ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ಕಾವ್ಯ ಭಾರತದ ಸಾಹಿತ್ಯ ಲೋಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದು, ಇದು ಅಜರಾಮರ ಗೀತೆಯಾಗಿದೆ ಎಂದು ಹಿರಿಯ ಸಾಹಿತಿ ಡಾ. ಪ್ರಧಾನ ಗುರುದತ್ತ ಅವರು ಅಭಿಪ್ರಾಯಪಟ್ಟರು.

error: Content is protected !!