Tag: corona

Home corona

ಕೊರೊನಾ ಸೋಂಕು ತೀವ್ರವಾದರೆ ಮಾತ್ರ ಆಸ್ಪತ್ರೆಗೆ ದಾಖಲು

ಬೆಂಗಳೂರು : ಹೆಚ್ಚು ರೋಗ ಲಕ್ಷಣ ಇರುವವರು ಮತ್ತು ತೀವ್ರವಾಗಿ ಬಳಲುತ್ತಿರುವ ಕೋವಿಡ್ ರೋಗಿಗಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಕೊರೊನಾ ತಡೆಯಲು 15 ದಿನಗಳ ನಿರ್ಬಂಧ

ಬೆಂಗಳೂರು : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗ ತಡೆಗಟ್ಟಲು ದೆಹಲಿ ಮತ್ತು ಮಹಾರಾಷ್ಟ್ರ ಮಾದರಿಯಲ್ಲೇ ಅನುಷ್ಠಾನಗೊಳಿಸುವಂತೆ ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. 

ಜಿಲ್ಲೆಯಲ್ಲಿ 40 ಪಾಸಿಟಿವ್

ಜಿಲ್ಲೆಯಲ್ಲಿ ಸೋಮವಾರ 40 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.

ನರ್ಸಿಂಗ್ ಕಾಲೇಜಿನ 25 ವಿದ್ಯಾರ್ಥಿನಿಯರು ಸೇರಿ 47ಜನರಲ್ಲಿ ಕೊರೊನಾ ಸೋಂಕು ದೃಢ

ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 25 ವಿದ್ಯಾರ್ಥಿನಿಯರೂ ಸೇರಿದಂತೆ  ಜಿಲ್ಲೆಯಲ್ಲಿಂದು 47 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.

ಕೊರೊನಾ: ಶಿಕ್ಷಣದ ಮೇಲೆ ಪ್ರಹಾರ

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9ನೇ ತರಗತಿ ಯವರೆಗೆ ಶಾಲೆ ಹಾಗೂ ವಿದ್ಯಾಗಮವನ್ನು ಸಂಪೂರ್ಣ ನಿಲ್ಲಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್‌ ರಹಿತ ಕಠಿಣ ಕ್ರಮ

ಬೆಂಗಳೂರು : ಕೊರೊನಾ ನಿಯಮಾವಳಿ ಉಲ್ಲಂಘಿಸಿ ಮದುವೆ ಮತ್ತು ಇತರೆ ಸಮಾರಂಭ ನಡೆಸಿದರೆ, ಅಂತಹವರ ವಿರುದ್ಧ ದಂಡ ವಿಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಇಂದು ಕೈಗೊಂಡಿದೆ. 

ಮಕ್ಕಳಿಗೆ ಕೊರೊನಾ ಕಂಟಕವಲ್ಲ

ನವದೆಹಲಿ : ಹದಿನಾಲ್ಕು ವರ್ಷದೊಳಗಿನ ಮಕ್ಕಳ ಮೇಲೆ ಕೊರೊನಾ ಪರಿಣಾಮ ಕಡಿಮೆ ಎಂಬುದು ಅಧ್ಯಯನದಿಂದ ತಿಳಿದು ಬಂದಿರುವುದಾಗಿ ಕೇಂದ್ರ ಸಚಿವ ಹರ್ಷ ವರ್ಧನ್ ಲೋಕಸಭೆಗೆ ತಿಳಿಸಿದ್ದಾರೆ.

ಲಾಕ್ ಡೌನ್, ಕರ್ಫ್ಯೂ ಹೇರಲ್ಲ

ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್, ಸೀಲ್‌ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವುದಿಲ್ಲ. ಆದರೆ, ಮಾಸ್ಕ್ ಕಡ್ಡಾಯ, ನಾಲ್ಕು ಗೋಡೆಗಳ ಮಧ್ಯೆ ಸಭೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗುವುದು

ಮಾಸ್ಕ್ ಜಾಗೃತಿ ಮೂಡಿಸಿದ ಡಿಸಿ

ಕೊರೊನಾ ಎರಡನೇ ಅಲೆ ಅಪ್ಪಳಿಸುವ ಸಾಧ್ಯತೆ ಇದ್ದು, ಒಂದು ವೇಳೆ ಅಪ್ಪಳಿಸಿದರೆ ಮತ್ತೊಮ್ಮೆ ಲಾಕ್‌ ಡೌನ್ ಸಂಕಷ್ಟಕ್ಕೆ ಒಳಗಾಗ ಬೇಕಾಗುತ್ತದೆ. ಆದ್ದರಿಂದ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಲು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.

ಹೆಚ್ಚು ಜನ ಸೇರಿದರೆ ಕ್ರಮ : ಡಿಸಿ

ಕೊರೊನಾ ನಿಯಂತ್ರಣ ಹಿನ್ನೆಲೆ ಯಲ್ಲಿ ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ನಿಯಮಾನುಸಾರ ಎಫ್‍ಐಆರ್ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

error: Content is protected !!