ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ ಅವರು ಗುರುವಾರ ಹರಿಹರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡರು. ಲಸಿಕೆಯನ್ನು ಎಲ್ಲರೂ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಹರಿಹರ : ಕುರುಬ ಸಮಾಜಕ್ಕೆ ಎಸ್.ಟಿ. ಮೀಸಲಾತಿಗಾಗಿ ಶ್ರೀ ಕಾಗಿನೆಲೆ ಗುರುಪೀಠದಿಂದ ಬೆಂಗಳೂರಿನವರೆಗೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶ ಮಾಡಿದ ನಂತರ ಹರಿಹರ ನಗರಕ್ಕೆ ಇಂದು ಆಗಮಿಸಿದಾಗ, ಬರ ಮಾಡಿಕೊಳ್ಳಲಾಯಿತು.
ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗುವ ತನಕ ನಿರಂತರ ಹೋರಾಟ ನಡೆಸುವ ಬದ್ಧತೆಯೊಂದಿಗೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಕಾಗಿನೆಲೆಯಿಂದ ಆರಂಭಿಸಿದ ಪಾದಯಾತ್ರೆ, ಬೃಹತ್ ಸಮಾವೇಶದೊಂದಿಗೆ ತೆರೆ ಕಂಡಿದೆ.