ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ತನ್ನಿ
ಸಮಾಜದಲ್ಲಿರುವ ಅನಿಷ್ಟ ಪದ್ದತಿ ಅಳಿಸಿ ಹಾಕುವ ಮೂಲಕ ಮಾನವ ಘನತೆ ಉಳಿಸಬೇಕಾಗಿದೆ. ದೇವದಾಸಿ ಪದ್ದತಿ ಮುಕ್ತ ಸಮಾಜಕ್ಕೆ ನಾವೆಲ್ಲರೂ ಪಣ ತೊಡಬೇಕಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆಂಗಬಾಲಯ್ಯ ಕರೆ ನೀಡಿದರು.