ಸರ್ಕಾರ ಈ ಕೂಡಲೇ ರಾಜ್ಯದಲ್ಲಿರುವ 40 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸ ಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು
ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಹಕ್ಕುಪತ್ರ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ಪೌರ ಕಾರ್ಮಿಕರು ನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.