ಬಿಜೆಪಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಖಂಡಿಸಿ, ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಇಂದು ಪ್ರತಿಭಟಿಸಿ, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದರು.
ರಾಸಲೀಲೆ ಹಗರಣದಲ್ಲಿ ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕಾಗಿ ಪರ್ಯಾಯ ನಾಯಕತ್ವ ರೂಪಿಸಿಕೊಳ್ಳುತ್ತಿದ್ದ ಬೆಳಗಾವಿಯ ಸಕ್ಕರೆ ದೊರೆ ಕಾಮಕಾಂಡದಲ್ಲಿ ಸಿಲುಕಿದ್ದಾರೆ.