ಲಸಿಕೆ ಪಡೆದ ರವೀಂದ್ರನಾಥ್
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಕೋವ್ಯಾಕ್ಸಿನ್ ಲಸಿಕೆ ಪಡೆದರು. ಲಸಿಕೆಯ ಮೊದಲನೇ ಡೋಸ್ ಪಡೆದ ಶಾಸಕರು, ನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ಮನೆಗೆ ತೆರಳಿದರು.
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಕೋವ್ಯಾಕ್ಸಿನ್ ಲಸಿಕೆ ಪಡೆದರು. ಲಸಿಕೆಯ ಮೊದಲನೇ ಡೋಸ್ ಪಡೆದ ಶಾಸಕರು, ನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ಮನೆಗೆ ತೆರಳಿದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಶಾಸಕರ ಅನುದಾನದಲ್ಲಿ 17 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕ ಎಸ್.ಎ. ರವೀಂದ್ರನಾಥ್ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರುಗಳು ಚಾಲನೆ ನೀಡಿದರು.
ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಶಾಸಕರ ಅನುದಾನ ಬಳಕೆಗೆ ಹೆಚ್ಚು ಆದ್ಯತೆ ನೀಡಿರುವುದಾಗಿ ಶಾಸಕ ಎಸ್.ಎ. ರವೀಂದ್ರನಾಥ್ ತಿಳಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ 7ನೇ ವಾರ್ಡ್ ದೇವರಾಜ ಅರಸು ಬಡಾವಣೆಯ ಮೈದಾನದಲ್ಲಿ 49.24 ಲಕ್ಷ ರೂ. ವೆಚ್ಚದ ಆಕ್ಯುಪಂಕ್ಚರ್ ವಾಕಿಂಗ್ ಪಾತ್ ನಿರ್ಮಾಣ ಕಾಮಗಾರಿ ಮತ್ತು ಮಹಾನಗರ ಪಾಲಿಕೆ ಕಛೇರಿಯ ಆವರಣದಲ್ಲಿ 59 ಲಕ್ಷ ರೂ. ವೆಚ್ಚದಲ್ಲಿ ಉಪಹಾರ ಮಂದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ್ ಅವರು ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಬೆಂಗಳೂರಿನ ಜಯನಗರ ಮಾದರಿಯಲ್ಲಿ ಸ್ಥಳೀಯ ಜಯ ನಗರ ಸುತ್ತಮುತ್ತಲ ಪ್ರದೇಶವೂ ಅಭಿವೃದ್ಧಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೈಗೊಂಡು ಜನರ ಋಣ ತೀರಿಸುವೆ ಎಂದು ಹಿರಿಯ ಶಾಸಕ ಎಸ್.ಎ.ರವೀಂದ್ರನಾಥ್ ತಿಳಿಸಿದರು.