ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ವಕೀಲರ ಆಗ್ರಹ
ದೇಶದಲ್ಲಿ ಹೆಚ್ಚುತ್ತಿರುವ ವಕೀಲರ ಮೇಲಿನ ಹಲ್ಲೆ ಮತ್ತು ಹತ್ಯಾ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಕೀಲರ ಸಂರಕ್ಷಣಾ ಕಾಯ್ದೆಯನ್ನು (ಎಪಿಎ) ಜಾರಿಗೆ ತರುವಂತೆ ಆಗ್ರಹಿಸಿ, ದಿ ಲಾ ಅಸೋಸಿಯೇಷನ್ ಜಿಲ್ಲಾ ಘಟಕದ ನೇತೃತ್ವದಲ್ಲಿ ವಕೀಲರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.