ಮಹಿಳೆಯರು ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಹೆಣ್ಣು ಅಬಲೆಯಲ್ಲ ಸಬಲೆ ಎಂದು ಸಾಬೀತುಪಡಿಸುತ್ತಿದ್ದಾಳೆ. ಮಹಿಳಾ ಸ್ವಾತಂತ್ರ್ಯವನ್ನು ಧನಾತ್ಮಕವಾಗಿ ಹಾಗೂ ಸಂಸ್ಕೃತಿಯ ನೆಲೆಗಟ್ಟಿನಲ್ಲಿ ಬಳಸಿಕೊಂಡು ಮುನ್ನಡೆಯ ಬೇಕಿದೆ
ಹೆಣ್ಣಾಗಲಿ, ಗಂಡಾಗಲಿ ಮಕ್ಕಳೇ. ಅವರನ್ನೇ ಅಭಿಮಾನದಿಂದ ಬೆಳೆಸಿ, ಅವರಲ್ಲೇ ಎಲ್ಲವನ್ನೂ ಕಾಣಬೇಕು. ಆದರೆ, ಗಂಡೇ ಬೇಕೆಂಬ ಅಂಧ ವಿಶ್ವಾಸಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.