ರೋಗಿಗಳು ಆಸ್ಪತ್ರೆಗೆ ದಾಖಲಾಗುವಲ್ಲಿ ಆಗುತ್ತಿರುವ ಸಮಸ್ಯೆ ಗಳನ್ನು ಬಗೆಹರಿಸಲು ಆಸ್ಪತ್ರೆಯ ಹಂತದಲ್ಲಿ ಸಮಿತಿಗಳನ್ನು ರಚಿಸಿ ನೆರವು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
ಅಂತರಂಗದ ದರ್ಶನ ಮಾಡಿಸುವುದೇ ಧರ್ಮಗಳ ಉದ್ದೇಶ
ಈ ಜಗತ್ತಿನಲ್ಲಿರುವ ಎಲ್ಲಾ ಧರ್ಮಗಳ ಉದ್ದೇಶವೂ ಮಾನವನಿಗೆ ಅಂತರಂಗದ ದರ್ಶನ ಮಾಡಿಸುವುದಾಗಿದೆ.
ಬದುಕ್ಕಿದ್ದಾಗ ನೆಗೆಟಿವ್ ಸಾವಿನ ನಂತರ ಪಾಸಿಟಿವ್
ಕೊರೊನಾ ಸೋಂಕಿತನಿಗೆ ಸಮರ್ಪಕ ಚಿಕಿತ್ಸೆ ನೀಡದ ಕಾರಣ ಸಾವು ಸಂಭವಿಸಿದೆ ಎಂದು ನಗರದ ಗಾಂಧಿನಗರದ ಕುಮಾರ್ ಕುಟುಂಬದವರು ಹಾಗೂ ಸಂಬಂಧಿಕರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಲಾಕ್ಗೆ ಸ್ಪಂದನೆ ಜೊತೆ ಉಲ್ಲಂಘನೆ
ನಾಲ್ಕನೇ ಭಾನುವಾರದ ಲಾಕ್ಡೌನ್ ಗೂ ನಗರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ವಾರವೂ ನಗರ ಸ್ತಬ್ಧವಾಗಿತ್ತು.
ಜಿಲ್ಲಾಸ್ಪತ್ರೆಗೆ ಡಿಸಿ ದಿಢೀರ್ ಭೇಟಿ: ಪರಿಶೀಲನೆ
ನಗರದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ದೊರಕುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.
ಗ್ರಂಥಾಲಯಕ್ಕೆ ಪುಸ್ತಕ ನೀಡಿ
ಜಿಲ್ಲಾ, ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವ ಜನಿಕ ಗ್ರಂಥಾಲಯಗಳ ಉಪಯೋಗಕ್ಕಾಗಿ ದಾನದ ರೂಪದಲ್ಲಿ ಸಾರ್ವಜನಿಕರು ತಾವು ಓದಿದ ಉತ್ತಮ ಪುಸ್ತಕಗಳನ್ನು ಇದೇ ದಿನಾಂಕ 12 ರೊಳಗಾಗಿ ದೇಣಿಗೆ ರೂಪದಲ್ಲಿ ಉಚಿತ ವಾಗಿ ನೀಡಬಹುದಾಗಿದೆ.
ಚೀಟಿ ಸಂಸ್ಥೆಯಿಂದ ಮೋಸ ಹೋಗದಿರಿ
ಸಾರ್ವಜನಿಕರು ಅನಧಿಕೃತ ಚೀಟಿ ಸಂಸ್ಥೆ ಅಥವಾ ವ್ಯಕ್ತಿಗಳೊಂದಿಗೆ ವ್ಯವಹರಿಸಿ ಮೋಸ ಹೋಗಬಾರದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಮಧು ಶ್ರೀನಿವಾಸ್ ಟಿ ತಿಳಿಸಿದ್ದಾರೆ.
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ
ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬರುವ ಅಕ್ಟೋಬರ್ 17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ.
ಕುರಿ, ಮೇಕೆ, ಕೋಳಿ ಸಾಕಾಣಿಕೆ ತರಬೇತಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ದಿನಾಂಕ 9 ಮತ್ತು 10 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ಶಾಲಾ ಮಟ್ಟದಲ್ಲಿಯೇ ಪ್ರಶ್ನೆ ಪತ್ರಿಕೆಗಳ ರಚನೆಗೆ ಎಐಡಿಎಸ್ಓ ಆಗ್ರಹ
ಈ ಸಾಲಿನ ಎಸ್ಸೆಸ್ಸೆಲ್ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ, ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಿರ್ಧರಿಸಿದೆ.
ಅಂಗನವಾಡಿ ಕಾರ್ಯಕರ್ತೆ : ಅರ್ಜಿ ಆಹ್ವಾನ
ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾ ಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿ ಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಲೇಬೆನ್ನೂರಿನಲ್ಲಿ ಅಪರಿಚಿತ ಶವ ಪತ್ತೆ
ಮಲೇಬೆನ್ನೂರು : ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈತನ ಬಲಗೈ ಯಲ್ಲಿ ಲಕ್ಷ್ಮಿದೇವಿ. ಎಡಕೈಯಲ್ಲಿ ಭೀಮಪ್ಪ ಅಂತ ಹಚ್ಚೆ ಇರುತ್ತದೆ. ಸಂಬಂಧ ಪಟ್ಟವರು ಮಲೇಬೆನ್ನೂರು ಠಾಣೆ ಪೊಲೀಸರನ್ನು ಸಂಪರ್ಕಿಸಬಹುದು.
ಬಾಲ್ಯ ವಿವಾಹ ಅಪರಾಧ, ಗಂಡಿಗೆ 21, ಹೆಣ್ಣಿಗೆ 18 ವರ್ಷ ನಂತರವೇ ಮದುವೆ
ಬಾಲ್ಯವಿವಾಹ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಬಾಲ್ಯವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ.
ಮಾತೃದೇವೋ ಸಮಾಜ ಕಲ್ಯಾಣ ಚಾರಿಟಬಲ್ ಟ್ರಸ್ಟ್ನಿಂದ ಶಿಕ್ಷಕರಿಗೆ ಸನ್ಮಾನ
ಮಾತೃದೇವೋ ಸಮಾಜ ಕಲ್ಯಾಣ ಮತ್ತು ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಎಸ್.ಓ.ಜಿ ಕಾಲೋನಿಯ ಜಿ.ವಿ.ಎಸ್. ಕಾನ್ವೆಂಟ್ಗೆ ಭೇಟಿಕೊಟ್ಟು ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯಗಳನ್ನು ತಿಳಿಸಿ ಸಂಸ್ಥಾಪಕ ಅಧ್ಯಕ್ಷ ಪೋತುಲ ಶ್ರೀನಿವಾಸ ನೇತೃತ್ವದಲ್ಲಿ ಕೆ.ಎನ್. ಪ್ರಜ್ವಲ್ ಶಿಕ್ಷಕ ವೃತ್ತಿಯ ಮಹತ್ವದ ಬಗ್ಗೆ ಮಾತನಾಡಿದರು.
ಆರ್ಯ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರಕ್ಕೆ ಅರ್ಜಿ
ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿದ ದಾವಣಗೆರೆ ಜಿಲ್ಲೆಯ ಆರ್ಯ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ, ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಆಭ್ಯರ್ಥಿಗಳಿಂದ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಂದು ನೇತ್ರದಾನ ಪಾಕ್ಷಿಕ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ಮತ್ತು ದೃಷ್ಟಿ ದೋಷ ನಿಯಂತ್ರಣ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ 39ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆಯನ್ನು ಆಯೋಜಿಸಲಾಗಿದೆ.
ಹರಿಹರದಲ್ಲಿಂದು ಶಿಕ್ಷಕರ ದಿನಾಚರಣೆ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇಂದು ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಇಓ ಡಿ.ದುರುಗಪ್ಪ ತಿಳಿಸಿದರು.
ವೀರಮಾಹೇಶ್ವರ ಕೋ-ಆಪ್ ಸೊಸೈಟಿಯಿಂದ ಪುರಸ್ಕಾರ
ನಗರದ ಶ್ರೀ ವೀರಮಾಹೇಶ್ವರ ಸೊಸೈಟಿಯಿಂದ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ದಾವಣಗೆರೆ ಜಿಲ್ಲೆಯ ಜಂಗಮ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನಗರದಲ್ಲಿ ಇಂದು ಶಿಕ್ಷಕರ ದಿನಾಚರಣೆ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ, ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ನಗರದ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ
ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯ ಸಮಸ್ತ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಬಿ.ಸಿ.ಎಂ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಮೇಲೆ ಪೆೋಲೀಸ್ ದೌರ್ಜನ್ಯ ಸಿ.ಐ.ಟಿ.ಯು ಜಿಲ್ಲಾ ಸಮಿತಿ ಆರೋಪ
ನಗರದ ಬಿ.ಸಿ.ಎಂ. ಇಲಾಖೆ ಆಯುಕ್ತರ ಕಛೇರಿ ಎದುರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಮೇಲೆ ಪೆೊಲೀಸರು ಬಲ ಪ್ರಯೋಗಿಸಿ, ದೌರ್ಜನ್ಯದ ಮೂಲಕ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸಿಐಟಿಯು ಜಿಲ್ಲಾ ಸಮಿತಿ ಆರೋಪಿಸಿದೆ.
ಹಡಗಲಿ : ಅಪರಿಚಿತ ವ್ಯಕ್ತಿಯ ಶವ ಪತ್ತೆ
ಹಡಗಲಿ : ತಾಲ್ಲೂಕಿನ ಅಂಕಲಿ ಗ್ರಾಮದ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ಸಮಾರು 40 - 42 ವರ್ಷದ ಅಪರಿಚಿತ ವ್ಯಕ್ತಿಯ ಮೃತ ದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಹೊಳಲ್ಕೆರೆಯಲ್ಲಿಂದು ವಿಶೇಷ ಉಪನ್ಯಾಸ
ಶಿಕ್ಷಕರ ದಿನಾಚರಣೆ ಅಂಗವಾಗಿ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಇಂದು ಹಿರಿಯ ಪತ್ರಕರ್ತ ಹೆಚ್.ಬಿ.ಮಂಜುನಾಥ್ ಅವರಿಂದ ವಿಶೇಷ ಉಪನ್ಯಾಸ ಏರ್ಪಾಡಾಗಿದೆ.
ನಗರದ ನೂತನ ಕಾಲೇಜಿನಲ್ಲಿ ಇಂದು ಶಿಕ್ಷಕರ ದಿನಾಚರಣೆ
ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಉಪನ್ಯಾಸ ಕೊಠಡಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾವಸಾರ ಕ್ಷತ್ರಿಯ ಹಾಸ್ಟೆಲ್ ಆರಂಭ
ಇಲ್ಲಿನ ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದ ಸಮೀಪವಿರುವ ಭಾವಸಾರ ಕ್ಷತ್ರಿಯ ಹಾಸ್ಟೆಲ್ ಪುನರಾರಂಭವಾಗಿದೆ.
ಅಂಚೆ ಕುಂಚ ಚಿತ್ರ ಬರೆಯುವ ಸ್ಪರ್ಧೆ
ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಶ್ರೀ ಗಣೇಶೋತ್ಸವದ ಪ್ರಯುಕ್ತ 50 ಪೈಸೆ ಅಂಚೆ ಕಾರ್ಡಿನಲ್ಲಿ ಶ್ರೀ ಗಣೇಶನ ಚಿತ್ರ ಬರೆಯುವ ರಾಜ್ಯ ಮಟ್ಟದ ಉಚಿತ ಚಿತ್ರ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹರಿಹರ : ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಸಿದ್ಧತೆ
ಹರಿಹರ : ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಹಾಗೂ ಹಿಂದೂ ಮಹಾ ಗಣಪತಿ ಸಂಘದಿಂದ 5ನೇ ವರ್ಷದ ಗಣೇಶೋತ್ಸವ ಅಂಗವಾಗಿ ನಾಡಿದ್ದು ದಿನಾಂಕ 7ರ ಶನಿವಾರ ಬೆಳಗ್ಗೆ 11 ಗಂಟೆಗೆ ಬೃಹತ್ ಪೆಂಡಲ್ನಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಲಾಗುತ್ತದೆ.
ನಮ್ಮ ಸಂತೋಷ, ಸಾಧನೆಗೆ ಶಿಕ್ಷಕರೇ ಕಾರಣ
ಹರಪನಹಳ್ಳಿ : ಜೀವನದಲ್ಲಿ ನಾವು ದೊಡ್ಡ ನಗುವನ್ನು, ಸಂತೋಷದ ಮತ್ತು ಸಾಧನೆಯ ಕ್ಷಣವನ್ನು ಕಾಣಬೇಕೆಂದರೆ ಅದಕ್ಕೆ ಕಾರಣೀಕರ್ತರು ಶಿಕ್ಷಕರೇ ಆಗಿರುತ್ತಾರೆ ಎಂದು ಉಪವಿಭಾಗಾಧಿಕಾರಿ ಚಿದಾನಂದಸ್ವಾಮಿ ಹೇಳಿದರು.
ರಂಗೋಲಿ ಸ್ಪರ್ಧೆಯಲ್ಲಿ ಆಕರ್ಷಿಸಿದ ಅರ್ಥಶಾಸ್ತ್ರ..!
ನಗರದ ಸೀತಮ್ಮ ಪಿಯು ಕಾಲೇಜಿನ ಅರ್ಥಶಾಸ್ತ್ರ ವಿಭಾಗದಿಂದ ಬುಧವಾರ ಆಯೋಜಿಸಿದ್ದ `ಅರ್ಥಶಾಸ್ತ್ರದ ರೇಖಾ ಚಿತ್ರಗಳ ರಂಗೋಲಿ ಸ್ಪರ್ಧೆ' ಯಶಸ್ವಿಯಾಗಿ ನಡೆಯಿತು.
ಭಾವಸಾರ ವಿಷನ್ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣೆ
ಭಾವಸಾರ ವಿಷನ್ ಇಂಡಿಯಾ ಹಾಗೂ ಶ್ವಾಸಕೋಶ ತಜ್ಞ ಡಾ. ಅದೀಪ್ ಬಿ. ಅಂಬರಕರ್ ನೇತೃತ್ವದಲ್ಲಿ ಈಚೆಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು.
ಸದಸ್ಯತ್ವ ಸಂಖ್ಯೆ ಹೆಚ್ಚಿಸಿ, ಪಕ್ಷವನ್ನು ಬಲ ಪಡಿಸಿ
ಹೊನ್ನಾಳಿ : ಬಿಜೆಪಿ ಪಕ್ಷವನ್ನು ಸದೃಢಗೊಳಿಸಲು ಮತ್ತು ಪ್ರಧಾನಿ ಮೋದಿ ಅವರ ಕೈ ಬಲಪಡಿಸಲು, ಕಾರ್ಯಕರ್ತರು ಪಕ್ಷದ ಸದಸ್ಯತ್ವ ಸಂಖ್ಯೆ ಹೆಚ್ಚಿಸಬೇಕಿದೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ಸತತ ಪ್ರಯತ್ನ, ಶ್ರದ್ಧೆ ಇದ್ದರೆ ಸಾಧನೆ ಸಾಧ್ಯ
ಯಾವುದೇ ಸಾಧನೆಗೆ ವಯಸ್ಸು ಎಂಬುದು ಅಡ್ಡಿ ಬರುವುದಿಲ್ಲ. ಗುರಿಯನ್ನು ನಿಗದಿಪಡಿಸುವುದು ಉತ್ತಮ ಎಂದು ತಮ್ಮ 50ನೇ ವಯಸ್ಸಿನಲ್ಲಿ ಟ್ರಯಥ್ಲಾನ್ ಕ್ರೀಡೆಯಲ್ಲಿ ಐರನ್ಮ್ಯಾನ್ ಪ್ರಶಸ್ತಿಯನ್ನು ಪಡೆದ ನಗರದವರೇ ಆದ ನಟರಾಜ್ ಪರಾವರ್ ಅವರು ಪ್ರತಿಪಾದಿಸಿದರು.
ಸೌಹಾರ್ದಯುತ ಸಹಬಾಳ್ವೆ ಜೀವನದ ಉಸಿರಾಗಲಿ
ಶಿವಮೊಗ್ಗ : ಮಾನವನಿಗೆ ಸಂಸ್ಕಾರ ದೊರೆತರೆ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಉನ್ನತ ಗುರಿ ಮತ್ತು ಧ್ಯೇಯ ವ್ಯಕ್ತಿತ್ವ ವಿಕಾಸಕ್ಕೆ ದಾರಿದೀಪ.
ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದಿಂದ ಪತ್ರಿಕಾ ವಿತರಕರ ದಿನಾಚರಣೆ
ವಿಶ್ವ ಪತ್ರಿಕೆ ವಿತರಕರ ದಿನಾಚರಣೆಯ ಅಂಗವಾಗಿ ದಾವಣಗೆರೆ ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪತ್ರಿಕೆಯನ್ನು ಸರಬರಾಜು ಮಾಡುವ ಸ್ಥಳದಲ್ಲಿ ವಿಶ್ವ ದಿನಪತ್ರಿಕೆ ದಿನವನ್ನು ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.
ಮಲಬಾರ್ ಗೋಲ್ಡ್ ನಲ್ಲಿ ಶಿಕ್ಷಕರಿಗೆ ಸನ್ಮಾನ
ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಾಲ್ವರು ಉತ್ತಮ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಬಗರ್ ಹುಕುಂ ಸಾಗುವಳಿ ಪತ್ರಕ್ಕೆ ಆಗ್ರಹಿಸಿ ಮಲೇಬೆನ್ನೂರಿನಿಂದ ದಾವಣಗೆರೆವರೆಗೆ ರೈತರ ಪ್ರತಿಭಟನೆ
ಮಲೇಬೆನ್ನೂರು : ಬಗರ್ ಹುಕುಂ ಸಾಗುವಳಿ ಪತ್ರ ನೀಡುವಂತೆ ಒತ್ತಾಯಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗುರುವಾರ ಮಲೇಬೆನ್ನೂರಿನಿಂದ ದಾವಣಗೆರೆವರೆಗೆ ಪ್ರತಿಭಟನೆ ನಡೆಸಿ, ನಂತರ ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.
ರಕ್ಷಾ ಬಂಧನ ಒಂದು ಹೃದಯಸ್ಪರ್ಶಿ ಆಚರಣೆ
ರಕ್ಷಾ ಬಂಧನ ಸೋದರ-ಸೋದರಿಯರ ಪವಿತ್ರ ಬಂಧನವನ್ನು ಸಾರುವ ಹಬ್ಬವಾಗಿದೆ. ಸಹೋದರಿಯರು ಸಹೋದರರಿಗೆ ವಿಜಯದ ವೀರ ತಿಲಕವನ್ನು ಹಚ್ಚಿ ರಕ್ಷಾ ಬಂಧನವನ್ನು ಕಟ್ಟುತ್ತಾರೆ. ಅಣ್ಣ, ತಂಗಿ, ಅಕ್ಕ-ತಮ್ಮ ಎಲ್ಲರಿಗೂ ಪರಮಾತ್ಮನ ರಕ್ಷಣೆ ಸಿಗುತ್ತದೆ
ಸಮಾಜಮುಖಿ ಕಾರ್ಯಗಳಲ್ಲಿ ಸಿಸ್ಟರ್ ನಿವೇದಿತಾ ಮಹಿಳಾ ಸಮಾಜ
ಮಹಿಳಾ ಸಮಾಜದ ಸ್ತ್ರೀಯರು ಕುಟುಂಬ ನಿರ್ವಹಣೆಯ ಜತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವುದನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಗಾಯತ್ರಿ ದೇವರಾಜ್ ಶ್ಲ್ಯಾಘಿಸಿದರು.
ರಾಯಚೂರು ಬಳಿ ಶಾಲಾ ವಾಹನ-ಬಸ್ ಡಿಕ್ಕಿ: ಇಬ್ಬರು ಮಕ್ಕಳ ಸಾವು
ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮುಖಾಮುಖಿ ಡಿಕ್ಕಿ ಯಾಗಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟು, 15 ವಿದ್ಯಾರ್ಥಿ ಗಳು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ.
ಹರಿಹರ ಮರ್ಚೆಂಟ್ ಸಹಕಾರಿಗೆ 14.77 ಲಕ್ಷ ರೂ. ಲಾಭ
ಹರಿಹರ : ಹರಿಹರ ಮರ್ಚೆಂಟ್ಸ್ ಸೌಹಾರ್ದ ಸಹಕಾರಿ ಸಂಘವು 2023-24 ನೇ ಸಾಲಿನಲ್ಲಿ 14.77 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಂ ನಾಗರಾಜ್ ತಿಳಿಸಿದರು.
ಶಸಾಪ ಯುವ ಘಟಕದ ಜಿಲ್ಲಾ ಸಂಚಾಲಕರಾಗಿ ಶಿವರಾಜ್ ಕಬ್ಬೂರು
ಶರಣ ಸಾಹಿತ್ಯ ಪರಿಷತ್ತಿನ ಸಂಘಟನೆ, ಪ್ರಸಾರ ಮತ್ತು ಪ್ರಚಾರ ಕಾರ್ಯಕ್ಕಾಗಿ ದಾವಣಗೆರೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಸಂಚಾಲಕರನ್ನಾಗಿ ಕೆ.ಸಿ. ಶಿವರಾಜ್ ಕಬ್ಬೂರ್ ಅವರನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ನೇಮಕ ಮಾಡಿದ್ದಾರೆ.
ಹಿಂಡಸಘಟ್ಟ : ಅರುಣ್ ಕುಮಾರ್ಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಪ್ರದಾನ
ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹರಿಹರ ತಾಲ್ಲೂಕಿನ ಹಿಂಡಸಘಟ್ಟ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಿ.ಅರುಣ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು.
ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ಬಿಜೆಪಿ
ಹರಪನಹಳ್ಳಿ : ವಿಶ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣ್ ಹೇಳಿದರು.
ಆರೋಗ್ಯ ಇಲಾಖೆ ಮಳಿಗೆಗಳ ಸ್ವಾಧೀನ
ಹರಿಹರ : ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಆದೇಶದಂತೆ ನಗರದ ದೊಡ್ಡಿಬೀದಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಸೇರಿದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸಿದ್ದರೆೆನ್ನಲಾದ ವಾಣಿಜ್ಯ ಮಳಿಗೆಗಳನ್ನು ಅಧಿಕಾರಿಗಳು ಸ್ವಾಧೀನ ಪಡಿಸಿಕೊಂಡರು.
ಸತೀಶ್ ಜಾರಕಿಹೊಳಿಯವರ ಸಾಮಾಜಿಕ ಕಾರ್ಯಚಟುವಟಿಕೆಗಳು ಮಾದರಿ
ಮಲೇಬೆನ್ನೂರು : ಸತೀಶ್ ಜಾರಕಿಹೊಳಿ ಫೌಂಡೇಷನ್ ಹಲವು ವರ್ಷಗಳಿಂದ ಸಮಾಜಾಭಿವೃದ್ದಿಗೆ ಶ್ರಮಿಸುತ್ತಾ ಬಂದಿದ್ದು, ಇದರ ಅಂಗವಾಗಿ ಮಾನವ ಬಂಧುತ್ವ ವೇದಿಕೆ ಮತ್ತು ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಸಹಯೋಗದಲ್ಲಿ ಹಲವು ಜನಪರವಾದ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿವೆ
ಗೋವಿನಹಾಳ್ ನಿಂಗನಗೌಡರ ಪುಣ್ಯಸ್ಮರಣೆ
ಮಲೇಬೆನ್ನೂರು : ಗೋವಿನಹಾಳ್ ಡಿ.ಹೆಚ್. ನಿಂಗನಗೌಡ ಅವರ 50ನೇ ವರ್ಷದ ಪುಣ್ಯ ಸಂಸ್ಮರಣೆ ಅಂಗವಾಗಿ ಕೆ.ಎನ್. ಹಳ್ಳಿ ಗ್ರಾಮದಲ್ಲಿರುವ ನಿಂಗನಗೌಡರ ಪ್ರತಿಮೆಗೆ ನಿನ್ನೆ ಸಮಾಜದವರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ರಾಣೇಬೆನ್ನೂರು : ಹೆಸ್ಕಾಂ ಕಚೇರಿ ಮುಂದೆ ರೈತರ ಪ್ರತಿಭಟನೆ
ರಾಣೇಬೆನ್ನೂರು : ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಿ, ಆಧಾರ್ ಲಿಂಕ್ ಮಾಡುವ ಸರ್ಕಾರದ ಯೋಜನೆ ವಿರೋಧಿಸಿ, ರೈತ ಮುಖಂಡ ರವೀಂದ್ರಗೌಡ ಪಾಟೀಲರ ನೇತೃತ್ವದಲ್ಲಿ ಇಲ್ಲಿನ ಹೆಸ್ಕಾಂ ಕಚೇರಿ ಮುಂದೆ ಕೃಷಿ ಪಂಪ್ಸೆಟ್ಗಳ ಪರಿಕರಗಳನ್ನು ಬಿಸಾಕಿ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ತರಳಬಾಳು ನಗರದಲ್ಲಿ ಪೋಷಣ್ ಮಾಸಾಚರಣೆ
ತಾಲ್ಲೂಕು ಮಟ್ಟದ ಪೋಷಣೆ ಮಾಸಾಚರಣೆ ಕಾರ್ಯಕ್ರಮವು ಹದಡಿ ವೃತ್ತದ ತರಳಬಾಳು ನಗರದಲ್ಲಿ ಮೊನ್ನೆ ನಡೆಯಿತು. ತಾಯಿಯ ಹೆಸರಿನಲ್ಲಿ ಗಿಡ ನೆಡುವುದು, ಸೀಮಂತ, ಅನ್ನ ಪ್ರಾಶನ ಮುಂತಾದ ಕಾರ್ಯಕ್ರಮಗಳು ಜರುಗಿದವು.
ನಿವೃತ್ತ ಶಿಕ್ಷಕ ಶಿವಕುಮಾರ್ಗೆ ಸನ್ಮಾನ
ಬಾಪೂಜಿ ವಿದ್ಯಾ ಸಂಸ್ಥೆಯ ದಾವಣಗೆರೆ ಹಾಗೂ ಕುಣಿಬೆಳಕೆರೆ ಪ್ರೌಢಶಾಲೆಗಳಲ್ಲಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಆರ್. ಶಿವಕುಮಾರ್ ಅವರಿಗೆ ಜಿಲ್ಲಾ ಕಸಾಪ ವತಿಯಿಂದ ಸನ್ಮಾನಿಸಿದರು.
ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಎ.ಸಿ.ಎಂ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಇಲ್ಲಿನ ಎ.ಸಿ.ಎಂ ಶಾಲೆಯ ವಿದ್ಯಾರ್ಥಿಗಳು 2024-25ನೇ ಸಾಲಿನ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಪರದಾಟ : ಬಸ್ ನಿಲುಗಡೆಗೆ ಆಗ್ರಹ
ಹರಪನಹಳ್ಳಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳನ್ನು ನಿಲುಗಡೆ ಮಾಡಲು ಒತ್ತಾಯಿಸಿ ಜಿಟ್ಟಿನಕಟ್ಟೆ, ತಲವಾಗಲು, ಗುಂಡಗತ್ತಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹರಪನಹಳ್ಳಿ ಬೆಂಡಿಗೇರಿ ಕಂಚಿಕೇರಿ ದಾವಣಗೆರೆ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಕೆಎಸ್ಆರ್ಟಿಸಿ ನೌಕರರ ಸಂಘದ ಅಧ್ಯಕ್ಷರಾಗಿ ಎಸ್. ಓಂಕಾರಪ್ಪ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು ಕೇಂದ್ರೀಯ ವಿಭಾಗದ 4 ನಿಗಮಗಳ ನೌಕರರ ಸಹಕಾರ ಸಂಘದಿಂದ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದಾವಣಗೆರೆ ವಿಭಾಗದ ಕಿರಿಯ ಸಹಾಯಕ ಎಸ್. ಓಂಕಾರಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಾನು, ಶ್ವೇತಾ, ಪರ್ವೀನ್ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರು
ಹರಪನಹಳ್ಳಿ : 2024-25 ನೇ ಸಾಲಿನ ವಿಜಯನಗರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಿ.ಜಿ. ಬಾನು, ಜಿ. ಶ್ವೇತ ಹಾಗೂ ಪರ್ವೀನ್ ಅವರುಗಳು ಆಯ್ಕೆಯಾಗಿರುತ್ತಾರೆ.