Tag: ಹರಿಹರ

Home ಹರಿಹರ

ಹೊಳೆಸಿರಿಗೆರೆ : ಸ.ವಿಜ್ಞಾನ ಶಿಕ್ಷಕರ ಕಾರ್ಯಾಗಾರ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಯಲ್ಲಿ ಹರಿಹರ ತಾಲ್ಲೂಕು ಸಮಾಜ ವಿಜ್ಞಾನ ಕ್ಲಬ್ ವತಿಯಿಂದ ಗುರುವಾರ ಸಮಾಜ ವಿಜ್ಞಾನ ಶಿಕ್ಷಕರಿಗೆ ಹತ್ತನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿನ್ಯಾಸ ಹಾಗೂ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಮಲೇಬೆನ್ನೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

ಮಲೇಬೆನ್ನೂರು : ಪಟ್ಟಣದಲ್ಲಿ ಬಿಜೆಪಿ ಸರ್ಕಾರದ ಕಾರ್ಯಸಾಧನೆಯ ಕರಪತ್ರ ಮತ್ತು ಸ್ಟಿಕ್ಕರ್ ಹಾಗೂ ಗೋಡೆ ಬರಹ ಅಂಟಿಸುವುದರ ಜೊತೆಗೆ ಪಕ್ಷದ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸುವ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ವಿದ್ಯಾಭ್ಯಾಸಕ್ಕೆ ಶ್ರೀನಿವಾಸ್ ನೆರವು

ಹರಿಹರ : ತಾಲ್ಲೂ ಕಿನ ದೇವರಬೆಳಕೆರೆ ಗ್ರಾಮದ ಪರಿಶಿಷ್ಟ ಜಾತಿಯ ಮಂಜಪ್ಪ, ನಾಗಮ್ಮ ದಂಪತಿ ಪುತ್ರಿ ಎಂ. ಕಾವ್ಯ ಹುಬ್ಬಳ್ಳಿಯ ವೈದ್ಯಕೀಯ ಕಾಲೇಜಿ ನಲ್ಲಿ 3 ನೇ ವರ್ಷದ ಎಂ.ಬಿ.ಬಿ.ಎಸ್. ವ್ಯಾಸಂಗ ಮಾಡುತ್ತಿದ್ದಾರೆ.

ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ರಥಯಾತ್ರೆಗೆ ಜಿಗಳಿಯಲ್ಲಿ ಸ್ವಾಗತ

ಸ್ವ-ಸಹಾಯ ಸಂಘಗಳ ಮಹಿಳಾ ಸಮಾವೇಶ ಹಾಗೂ ಕೃಷಿ ಮೇಳದ ಅಂಗವಾಗಿ ಸಂಚರಿಸುತ್ತಿರುವ ರಥಯಾತ್ರೆಗೆ ಶುಕ್ರವಾರ ಜಿಗಳಿಯಲ್ಲಿ ಪೂಜೆ ಸಲ್ಲಿಸಿ, ದಾವಣಗೆರೆ ಜಿಲ್ಲೆಯ ಸಂಚಾರಕ್ಕೆ ಚಾಲನೆ ನೀಡಲಾಯಿತು.

ಫೆ.5ರಂದು ಹರಿಹರೇಶ್ವರ ಸ್ವಾಮಿ ರಥೋತ್ಸವ

ಹರಿಹರ : ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ಫೆಬ್ರವರಿ 5 ರ ಭಾನುವಾರ ಬೆಳಗ್ಗೆ 10-50 ಗಂಟೆಗೆ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಲಿದೆ ಎಂದು ತಹಶೀಲ್ದಾರ್ ಎಂ.ಬಿ. ಅಶ್ವತ್ಥ್‌ ತಿಳಿಸಿದರು.

ಮಲೇಬೆನ್ನೂರಿನಲ್ಲಿ ಮತದಾನದ ಪ್ರತಿಜ್ಞಾ ವಿಧಿ

ಶ್ರೀ ಬೀರಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪುರಸಭೆ ಮತ್ತು ನಾಡ ಕಛೇರಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಹರಿಹರದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣೆ

ಹರಿಹರ ಗುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಂಡಜ್ಜಿ ವ್ಯಾಪ್ತಿಯ 40 ಕ್ಷಯ ರೋಗಿಗಳಿಗೆ ಉಚಿತವಾಗಿ ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಹನಗವಾಡಿ ಇವರು ಪೌಷ್ಟಿಕಾಂಶ ಉಳ್ಳ ಆಹಾರ ಪದಾರ್ಥಗಳನ್ನು ವಿವರಿಸಿದರು.

ಕುಂಬಳೂರು : ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ರಾಮಪ್ಪ ಚಾಲನೆ

ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಆವರಣದಲ್ಲಿ 16 ಲಕ್ಷ ರೂ. ವೆಚ್ಚದ ನೂತನ ಕೊಠಡಿ ನಿರ್ಮಾಣಕ್ಕೆ ಶಾಸಕ ಎಸ್. ರಾಮಪ್ಪ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.

ಜಿಗಳಿ ಗ್ರಾ.ಪಂ ಅಧ್ಯಕ್ಷರಾಗಿ ವಿನೋದ ಹಾಲೇಶ್‌ಕುಮಾರ್ ಉಪಾಧ್ಯಕ್ಷರಾಗಿ ಜಿ. ಬೇವಿನ ಹಳ್ಳಿಯ ಕೆ.ಜಿ. ಮಹಾಂತೇಶಪ್ಪ

ಮಲೇಬೆನ್ನೂರು : ಜಿಗಳಿ ಗ್ರಾ.ಪಂ ಅಧ್ಯಕ್ಷರಾಗಿ ಶ್ರೀಮತಿ ವಿನೋದ ಜಿ.ಆರ್ ಹಾಲೇಶ್‌ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಜಿ. ಬೇವಿನಹಳ್ಳಿಯ ಕೆ.ಜಿ. ಮಹಾಂತೇಶಪ್ಪ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಲೇಬೆನ್ನೂರಿನಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ

ಮಲೇಬೆನ್ನೂರು : ಬೆಳ್ಳೂಡಿ ಗ್ರಾಮದ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ವನ್ನು ಸಂಭ್ರಮದಿಂದ ಆಚರಿಸಲಾಯಿತು. 

ಹರಿಹರ : ಎಂ.ಕೆ.ಇ.ಟಿ. ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಹರಿಹರ : ನಗರದ ಎಂ.ಕೆ.ಇ.ಟಿ. ಸಿ.ಬಿ.ಎಸ್.ಇ ಶಾಲೆಯ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಯ ಪ್ರಶಸ್ತಿಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.